ಬಂಟ್ವಾಳ: ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ತಾಲೂಕು ಮಟ್ಟದ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ಕನಕದಾಸರು ಸಂಗೀತಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸಮಾಜದಲ್ಲಿ ಸಮಾನತೆಯನ್ನು ಸಾರಿದವರು ಎಂದರು.
ಕಂದಾಯ ನಿರೀಕ್ಷಕರಾದ ಕುಮಾರ್ ಟಿ.ಸಿ ಮಾತಾನಾಡಿ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಕನಕದಾಸರು ತಮ್ಮ ಸರಳ ರಚನೆಗಳ ಮೂಲಕ ಸಮಾಜ ತಿದ್ದುವ ಕೆಲಸವನ್ನು ಮಾಡಿದರು ಎಂದರು. ಈ ಸಂದರ್ಭದಲ್ಲಿ ಉಪತಹಸೀಲ್ದಾರ್ ದಿವಾಕರ ಮುಗುಳಿಯ ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು.ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಸ್ವಾಗತಿಸಿ ವಂದಿಸಿದರು.
Be the first to comment on "ಬಂಟ್ವಾಳದಲ್ಲಿ ತಾಲೂಕು ಮಟ್ಟದ ಕನಕದಾಸ ಜಯಂತಿ ಆಚರಣೆ"