ಬಂಟ್ವಾಳ

ಒಡ್ಡೂರು ಫಾರ್ಮ್ಸ್ ನಲ್ಲಿ ಕೃಷಿ ಖುಷಿ: ಮಕ್ಕಳ ಮಾಸೋತ್ಸವ ಹಿನ್ನೆಲೆಯಲ್ಲಿ ವಿನೂತನ ಕಾರ್ಯಕ್ರಮ

ಬಂಟ್ವಾಳ: ಮಕ್ಕಳ ಮಾಸೋತ್ಸವ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ನಿವಾಸ ಒಡ್ಡೂರು ಫಾರ್ಮ್ಸ್ ನಲ್ಲಿ ಕೃಷಿ ಖುಷಿ ಎಂಬ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಬಂಟ್ವಾಳ ತಾಲೂಕಿನ 5 ಸರ್ಕಾರಿ ಶಾಲೆಗಳ ಸುಮಾರು 40ಕ್ಕೂ ಅಧಿಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡರು.

ಸ್ವತಃ ಕೃಷಿ ಕಾರ್ಯವನ್ನು ನಡೆಸುತ್ತಿರುವ ರಾಜೇಶ್ ನಾಯ್ಕ್ ಅವರ ವಿಶಾಲವಾದ ಕೃಷಿ ಭೂಮಿಯಲ್ಲಿ ಗೋವು, ಸಸ್ಯ ಸಂಪತ್ತು, ಕೆರೆ ಹಾಗೂ ಅಲ್ಲಿನ ವೈವಿಧ್ಯಮಯ ಕೃಷಿ ಚಟುವಟಿಕೆಗಳನ್ನು ವೀಕ್ಷಿಸಿದ ಮಕ್ಕಳು ಹಲವು ಸಂದೇಹಗಳನ್ನು ಕೇಳಿ ಪರಿಹರಿಸಿಕೊಂಡರು. ದಿನವಿಡೀ ಮಕ್ಕಳೊಂದಿಗೆ ಕಳೆದ ಶಾಸಕರು, ಮಕ್ಕಳೊಂದಿಗೆ ಅನುಭವ ಹಂಚಿಕೊಂಡರು. ಮಕ್ಕಳೊಂದಿಗೆ ಇನ್ನು ಮುಂದಕ್ಕೂ ಬೆರೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ ಶಾಸಕರು ಅದಕ್ಕೊಂದು ದಿನ ನಿಗದಿಪಡಿಸುವ ಕುರಿತು ತಿಳಿಸಿದರು.

ಈ ಸಂದರ್ಭ ಮಾತನಾಡಿದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ,. ಅನುಭವಾತ್ಮಕ ಕಲಿಕೆಯನ್ನು ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಅಳವಡಿಕೆಯಾಗಿದ್ದು, ಅದು ಇಂತಹ ಕಾರ್ಯಕ್ರಮಗಳ ಮೂಲಕ ಸಾಕಾರವಾಗುತ್ತದೆ. ಇಲ್ಲಿನ ಆಸಕ್ತಿಯ ವಿಚಾರದಲ್ಲಿ ಮುಂದುವರಿಯಲು ಅವಕಾಶವಿದ್ದು, ಭಾರತೀಯತೆ ಹೊಸ ಶಿಕ್ಷಣ ನೀತಿ ಕಲಿಸುತ್ತದೆ ಎಂದರು. ಬಂಟ್ವಾಳ ಲಯನ್ಸ್ ಕ್ಲಬ್ ನ ನಿರ್ಮಲ ಹೃದಯ ವಿಶೇಷಚೇತನ ಮಕ್ಕಳ ಪಾಲನಾ ಕೇಂದ್ರದ ಸಂಚಾಲಕ ದಾಮೋದರ್ ಮುಖ್ಯ ಅತಿಥಿಯಾಗಿದ್ದರು.

ಜಾಹೀರಾತು

ಪೊಲೀಸ್ ಇಲಾಖೆಯ ಕುರಿತು ಬಂಟ್ವಾಳ ಗ್ರಾಮಾಂತರ ಪಿಎಸ್‌ಐ ಪ್ರಸನ್ನ, ಆರೋಗ್ಯ ಇಲಾಖೆಯ ಡಾ. ಹೇಮಪ್ರಭಾ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಡಿಸೋಜಾ, ಚೈಲ್ಡ್ ಲೈನ್‌ನ ದೀಕ್ಷಿತ್ ಮಕ್ಕಳ ಜತೆ ಸಂವಾದ ನಡೆಸಿದರು. ಬುಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಪ್ರೊಬೆಷನರಿ ಪಿಎಸ್‌ಐ ರಾಮಕೃಷ್ಣ, ಶಿಕ್ಷಣ ಸಂಯೋಜಕಿ ಸುಜಾತಕುಮಾರಿ, ವಿವಿಧ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು. ಮಕ್ಕಳ ಹಕ್ಕುಗಳ ಮಾಸೋತ್ಸವ ಜಿಲ್ಲಾ ಸಂಚಾಲಕ ಮಂಜು ವಿಟ್ಲ, ಸಂಪನ್ಮೂಲ ವ್ಯಕ್ತಿ ಮೌನೇಶ್ ವಿಶ್ವಕರ್ಮ ಕಾರ್ಯಕ್ರಮ ನಡೆಸಿಕೊಟ್ಟರು. ಪತ್ರಕರ್ತ ಸಂದೀಪ್ ಸಾಲ್ಯಾನ್ ಸ್ವಾಗತಿಸಿ, ಪತ್ರಕರ್ತ ಹರೀಶ್ ಮಾಂಬಾಡಿ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts