ಬಂಟ್ವಾಳ: ಸಜಿಪಮೂಡ ಗ್ರಾಪಂನ ಬೂತ್ ಸಂಖ್ಯೆ 189ರಲ್ಲಿ ತೆಂಗಿನಸಸಿಯನ್ನು ವಿತರಿಸುವ ಮೂಲಕ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಮ್ಮ ನಡೆ, ಬೂತ್ ಕಡೆ ಕಾರ್ಯಕ್ರಮವನ್ನು ನಡೆಸಲಾಯಿತು.
ಮಾಜಿ ಸಚಿವ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಹನೀಫ್ ಅವರ ಅದ್ಯಕ್ಷತೆಯಲ್ಲಿ ತೆಂಗಿನ ಸಸಿಯನ್ನು ನೀಡಿ ಕಾರ್ಯಕ್ರಮ ಆಚರಿಸಲಾಯಿತು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಆರ್ಷದ್ ಶರವು, ತಾಲೂಕ್ ಪಂಚಾಯತ್ ಮಾಜಿ ಸದಸ್ಯರಾದ ಸಂಜೀವ ಪೂಜಾರಿ, ಸಜೀಪ ಮೂಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹರೀಣಾಕ್ಷಿ, ಉಪಾಧ್ಯಕ್ಷರಾದ ಸಿದ್ದೀಕ್ ಕೊಳಕೆ, ವಲಯ ಅಧ್ಯಕ್ಷರಾದ ಎನ್. ಅಬ್ದುಲ್ ಕರೀಂ, ಬೂತ್ ಅಧ್ಯಕ್ಷ ರಾದ ಹನೀಫ್ ಜಾಡಕೋಡಿ, ಹಾಗೂ ಹಲವಾರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…