Uncategorized

27ರಂದು ಬಂಟ್ವಾಳ ತಾಲೂಕಿನಲ್ಲಿ ಮೆಗಾ ಲಸಿಕಾ ಅಭಿಯಾನ

ಬಂಟ್ವಾಳ: ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಬೃಹತ್ ಕೋವಿಡ್ ಲಸಿಕಾ ಶಿಬಿರವನ್ನು ಆಯೋಜಿಸಲಾಗಿದ್ದು, ಬಂಟ್ವಾಳ ತಾಲೂಕಿನಲ್ಲಿ 27ರಂದು ನಡೆಯಲಿದೆ. ತಾಲೂಕಿನಲ್ಲಿ 11085 ಎರಡನೇ ಡೋಸ್ ಮತ್ತು ಮೊದಲ ಡೋಸ್ 5 ಸಾವಿರ ಲಸಿಕೆಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ.

ತಾಲೂಕಿನ ಎಲ್ಲ ಉಪಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆಸ್ಪತ್ರೆಗಳ ವ್ಯಾಪ್ತಿಯಲ್ಲಿ ನಡೆಯಲಿದೆ. ತಾಲೂಕಿನ 101 ಕಡೆಗಳಲ್ಲಿ ಮೆಗಾ ಲಸಿಕಾ ಶಿಬಿರ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ತಾಲೂಕಿನಲ್ಲಿದ್ದು, ಎರಡನೇ ಡೋಸ್ ನಿಗದಿಯಾದರೂ ಹಾಕದೇ ಇದ್ದವರು ಹಾಗೂ ಮೊದಲ ಡೋಸ್ ಲಸಿಕೆ ಇನ್ನೂ ಹಾಕಿಸಿಕೊಳ್ಳದವರು ಈ ಮೆಗಾ ಲಸಿಕಾ ಅಭಿಯಾನದಲ್ಲಿ ಸಮೀಪದ ಕೇಂದ್ರಗಳಲ್ಲಿ ಪಾಲ್ಗೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ