ಬಂಟ್ವಾಳ: ಬಂಟ್ವಾಳ ತಾಲೂಕಿನ ಕಲ್ಲಗುಡ್ಡೆ ಎಂಬಲ್ಲಿ ಶನಿವಾರ ಮಧ್ಯಾಹ್ನ ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತಕ್ಕೆ ಸಂಬಂಧಿಸಿ ಬಂಟ್ವಾಳ ತುಂಬ್ಯ ಜಂಕ್ಷನ್ ಬಳಿ ಎರಡು ತಂಡಗಳು ಪರಸ್ಪರ ಹಲ್ಲೆ ನಡೆಸಿಕೊಂಡ ಘಟನೆ ನಡೆದಿದ್ದು, ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ನಾಲ್ವರನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಧನುಷ್ ಆಚಾರ್ಯ ಹಾಗೂ ಮಹಮ್ಮದ್ ಇರ್ಷಾದ್ ಪ್ರತ್ಯೇಕವಾಗಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದು, ತನಿಖೆ ನಡೆದಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)