ಬಂಟ್ವಾಳ: ದೇವಂದಬೆಟ್ಟು ದೇವಸ್ಥಾನ ಸಂಪರ್ಕಿಸುವ 4 ರಸ್ತೆಗಳನ್ನು ಅಭಿವೃದ್ಧಿ, ಕುಡಿಯುವ ನೀರಿಗೆ ಪ್ರತ್ಯೇಕ ಕೊಳವೆ ಬಾವಿ ವ್ಯವಸ್ಥೆ ಮಾಡಲಾಗುವುದು ಮತ್ತು ತಡೆಗೋಡೆ ನಿರ್ಮಾಣಕ್ಕೆ ಸಹಕಾರ ನೀಡಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ತಿಳಿಸಿದರು.
ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿನೀಡಿ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯಗಳನ್ನು ಪರಿಶೀಲಿಸಿ ಮಾತನಾಡಿದರು. ಕಳ್ಳಿಗೆ ಸೇರಿದಂತೆ ಹಲವು ಗ್ರಾಮಗಳಿಗೆ ಮನೆಮನೆಗೆ ಸಂಪರ್ಕಿಸುವ ಕುಡಿಯುವ ಯೋಜನೆಗೆ 180 ಕೋ.ರೂ. ವೆಚ್ಚದಲ್ಲಿ ಯೋಜನೆಯನ್ನು ರೂಪಿಸಲಾಗಿದ್ದು, ಶನಿವಾರ ಸರ್ಕಾರದಿಂದ ಅನುಮೋದನೆ ಸಿಕ್ಕಿರುವುದಾಗಿ ತಿಳಿಸಿದರು. ತಾಲೂಕಿನಾದ್ಯಂತ ಹಲವು ಕಿಂಡಿಅಣೆಕಟ್ಟುಗಳನ್ನು ನಿರ್ಮಿಸಲಾಗಿದ್ದು, ಮುಂದಿನ ಒಂದೂವರೆ ವರ್ಷದಲ್ಲಿ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಯೋಜನೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಬಳಿಕ ಅವರು ವಿವಿಧ ಕಾಮಗಾರಿ ನಡೆಯಲಿರುವ ಸ್ಥಳ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ಬಾಳಿಕೆ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಉಪಾಧ್ಯಾಯ, ಕಾರ್ಯದರ್ಶಿ ದಾಮೋದರ ನೆತ್ತರಕೆರೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ರಂಗೋಲಿ, ಪ್ರಧಾನ ಕಾರ್ಯದರ್ಶಿ ಗಣೇಶ್ ಸುವರ್ಣ ತುಂಬೆ, ಕೋಶಾಧಿಕಾರಿ ಕವಿರಾಜ್ ಚಂದ್ರಿಗೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಕೇಶವ ದೈಪಲ, ದಿವಾಕರ ಶೆಟ್ಟಿ ಕುಪ್ಪಿಲ, ಅಮಿತಾ ವಿಶ್ವನಾಥ್ ದಾಸರಕೋಡಿ, ಪ್ರಮುಖರಾದ ಭುವನೇಶ್ ಪಚ್ಚಿನಡ್ಕ, ಜ್ಯೋತೀಂದ್ರ ಶೆಟ್ಟಿ ಮುಂಡಾಜೆ, ದಿವಾಕರ ಶೆಟ್ಟಿ ಪರಾರಿ, ಪ್ರತಿಭಾ ಪಿ ಶೆಟ್ಟಿ, ಯಶೋಧಾ ಜಾರಂದಗುಡ್ಡೆ, ಮನೋಜ್ ವಳವೂರು, ಪುರುಷೋತ್ತಮ ಶೆಟ್ಟಿ ವಾಮದಪದವು, ಯೋಗೀಶ್ ದರಿಬಾಗಿಲು, ರೇಣುಕಾ ಪಂಬದಬೆಟ್ಟು, ಉಮಾ ಚಂದ್ರಶೇಖರ್, ರೇವತಿ ಮಾಡಂಗೆ, ಉಮೇಶ್ ಗಾಂದೋಡಿ, ವಾಮಯ್ಯ ಕೋಟ್ಯಾನ್ ಕನಪಾಡಿ, ರಾಘವ ಕಾರಂತ್ ಕನಪಾಡಿ, ಅರ್ಚಕರಾದ ರಾಧಾಕೃಷ್ಣ ಕಡಂಬಳಿತ್ತಾಯ, ಶಿವರಾಮ ಶಿಬರಾಯ, ವೇಣುಗೋಪಾಲ ಶೆಟ್ಟಿ ಕುಪ್ಪಿಲ ಮತ್ತಿತರರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿಗಳ ಸಭೆ ನಡೆಯಿತು. ವಲಯವಾರು ಜವಾಬ್ದಾರಿ ಹಸ್ತಾಂತರಿಸಲಾಯಿತು. ಮುಂದಿನ ಯೋಜನೆಗಳಿಗೆ ಎಲ್ಲಾ ವಿವಿಧ ಸಮಿತಿಯವರ ಸಹಕಾರವನ್ನು ಕೋರಲಾಯಿತು.
ಮಾತೃ ಸಮಾವೇಶದ ಆಮಂತ್ರಣ ಬಿಡುಗಡೆ: ಇದೇ ಸಂದರ್ಭ ಡಿಸೆಂಬರ್ 12ರಂದು ನಡೆಯಲಿರುವ ಮಾತೃ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಶಾಸಕ ರಾಜೇಶ್ ನಾಯ್ಕ್ ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಬಳಿಕ ವ್ಯವಸ್ಥಾಪನಾ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ದೇವಸ್ಥಾನದಲ್ಲಿ ನಡೆಯಲಿರುವ ವಿವಿಧ ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ಶಾಸಕರಿಗೆ ಮನವಿಯನ್ನು ಸಲ್ಲಿಸಲಾಯಿತು.