ಬಂಟ್ವಾಳ

ಬಿ.ತಮ್ಮಯ ಸ್ಮರಣಾರ್ಥ ನಡೆದ ರಾಜ್ಯಮಟ್ಟದ ಹನಿಗವನ ಸ್ಪರ್ಧೆಯ ಫಲಿತಾಂಶ ಪ್ರಕಟ

ಬಂಟ್ವಾಳನ್ಯೂಸ್ ವರದಿ

ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ಆಯೋಜಿಸಿದ ಕವಿ, ಸಾಹಿತಿ ಸಂಘಟಕ ಬಿ.ತಮ್ಮಯ ಸ್ಮರಣಾರ್ಥ ನಡೆಸಿದ ರಾಜ್ಯಮಟ್ಟದ ಹನಿಗವನ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಸಾರ್ವಜನಿಕ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ: ಸಹನಾ ಕಾಂತಬೈಲು, ಮಡಿಕೇರಿ,  ದ್ವಿತೀಯ: ಶಶಿಕಾಂತ್ ರಾ ಖೋತ, ಎಮ್ ಆರ್ ಪಿ ಎಲ್, ಇವರು ವಿಜೇತರಾಗಿರುತ್ತಾರೆ. ವಿದ್ಯಾರ್ಥಿ ವಿಭಾಗದಲ್ಲಿ ಪ್ರಥಮ: ಶ್ರೇಯಾ ಸಿ.ಪಿ., ಎಸ್ ಎಸ್ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯ, ದ್ವಿತೀಯ: ಹರ್ಷಿತ ಎಸ್ ಶಾಂತಿಮೂಲೆ, ಬೆಸೆಂಟ್ ಮಹಿಳಾ ಕಾಲೇಜು ಮಂಗಳೂರು ಇವರು ಬಹುಮಾನ ವಿಜೇತರಾಗಿರುತ್ತಾರೆ. ಬಂಟ್ವಾಳದಲ್ಲಿ ಆಯೋಜಿಸಲಾಗುವ ಬಿ ತಮ್ಮಯ್ಯ ಸಂಸ್ಮರಣ ಕಾರ್ಯಕ್ರಮದಲ್ಲಿ ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts