ಬಂಟ್ವಾಳ ತಾಲೂಕು ಎಲಿಯನಡುಗೋಡು ಮತ್ತು ಬೆಳ್ತಂಗಡಿ ತಾಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದಲ್ಲಿರುವ ಹೊಕ್ಕಾಡಿಗೋಳಿ ಮಹಿಷಮರ್ಧಿನಿ ಕಂಬಳ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಹೊಕ್ಕಾಡಿಗೋಳಿಯಲ್ಲಿ ಡಿ. 5ರಂದು ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ ನೋಣಾಲ್‌ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಬೆಳಗ್ಗೆ ಗಂಟೆ 7ಕ್ಕೆ ಶ್ರೀ ಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳ ಉದ್ಘಾಟಿಸಲಿರುವರು. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಅಧ್ಯಕ್ಷತೆ ವಹಿಸಲಿರುವರು. ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದು, ಸಂಸದ ನಳಿನ್ ಕುಮಾರ್ ಕಟೀಲು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.
ಗೃಹಮಂತ್ರಿ ಅರಗ ಜ್ಞಾನೇಂದ್ರ , ಪ್ರವಾಸೋದ್ಯಮ ಮತ್ತು ಪರಿಸರ ಸಚಿವ ಆನಂದ ಸಿಂಗ್, ಇಂಧನ ಸಚಿವ ವಿ.ಸುನಿಲ್ ಕುಮಾರ್, ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ, ಚಲನಚಿತ್ರ ನಿರ್ದೇಶಕರಾದ ರಾಜೇದ್ರ ಸಿಂಗ್ ಬಾಬು, ವಿಜಯ ಕುಮಾರ್ ಕೊಡಿಯಾಲ್ ಬೈಲ್, ಶಾಸಕರಾದ ಹರೀಶ್ ಪೂಂಜ, ಉಮಾನಾಥ ಕೋಟ್ಯಾನ್, ಡಾ.ವೈ. ಭರತ್ ಶೆಟ್ಟಿ, ಪ್ರತಾಪ ಸಿಂಹ ನಾಯಕ್, ಹರೀಶ್ ಕುಮಾರ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಅತಿಥಿಗಳಾಗಿ ಭಾಗವಹಿಸಲಿರುವರು. ಈ ಬಾರಿ ಒಟ್ಟು 125 ಕ್ಕೂ ಮಿಕ್ಕಿ ಜೋಡಿ ಓಟದ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ. ಸುಪ್ರೀಂ ಕೋರ್ಟಿನ ನಿರ್ದೇಶನದಂತೆ ಜಿಲ್ಲಾ ಕಂಬಳ ಸಮಿತಿಯ ಮಾರ್ಗದರ್ಶನದಲ್ಲಿ ಅಹಿಂಸಾತ್ಮಕವಾಗಿ ಕಂಬಳ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.