ಬಂಟ್ವಾಳನ್ಯೂಸ್ ವರದಿ
ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ವತಿಯಿಂದ ಸಂವಿಧಾನ ದಿನವನ್ನು ಆಚರಿಸಲಾಯಿತು, ಸೋಮವಾರಪೇಟೆಯ ನಿವೃತ್ತ ಪ್ರಾಧ್ಯಾಪಕ ಪ್ರೊ. ಕರಿಯಪ್ಪ ರೈ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಸಂವಿಧಾನ ಕುರಿತು ವಿವರಿಸಿದರು.
ಅಧ್ಯಕ್ಷತೆಯನ್ನು ಪ್ರಿನ್ಸಿಪಾಲ್ ಸೌಮ್ಯಾ ಎಚ್. ಕೆ. ವಹಿಸಿದ್ದರು. ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀನಿವಾಸ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಭಾಗದ ಮುಖ್ಯಸ್ಥೆ ನಸೀಮಾ ಬೇಗಮ್ ಸಂವಿಧಾನದ ಪೂರ್ವ ಪೀಠಿಕೆಯನ್ನು ಪಠಿಸಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು .ತೃತೀಯ ಬಿಎ ವಿದ್ಯಾರ್ಥಿಗಳು ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಭಾಷಣ ಸಂವಿಧಾನ ರಚನಾ ಸಭೆಯ ಸದಸ್ಯರು ಕರಡು ಸಮಿತಿಯ ಸದಸ್ಯರ ಭಾವಚಿತ್ರಗಳನ್ನು ಸಂಗ್ರಹಿಸಿ ವೀಡಿಯೋ ಪ್ರದರ್ಶಿಸಿದರು. ವಿದ್ಯಾರ್ಥಿನಿ ರಕ್ಷಾ ಪ್ರಾರ್ಥಿಸಿದರು. ಆಶ್ರಿತ್ ಸ್ವಾಗತಿಸಿದರು .ಯಕ್ಷಿತಾ ವಂದಿಸಿದರು. ಸುಭಾಸ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಡಾ ಶ್ರೀನಿವಾಸ್ ಹಾಗೂ ಶ್ರೀ ವಿನಯ್ ಉಪಸ್ಥಿತರಿದ್ದರು .
Be the first to comment on "ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ"