ಬಂಟ್ವಾಳನ್ಯೂಸ್ ವರದಿ www.bantwalnews.com REPORT
ಬಂಟ್ವಾಳ: ವಕೀಲರ ಸಂಘ (ರಿ ) ಬಂಟ್ವಾಳ ಆಶ್ರಯದಲ್ಲಿ ವಕೀಲರ ದಿನಾಚರಣೆ ಪ್ರಯುಕ್ತ ಕಾನೂನು ಕಾರ್ಯಗಾರ ಬಂಟ್ವಾಳದಲ್ಲಿ ಶುಕ್ರವಾರ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಬಾಲಗೋಪಾಲಕೃಷ್ಣ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘ (ರಿ) ಬಂಟ್ವಾಳದ ಅಧ್ಯಕ್ಷರಾದ ಬಿ. ಗಣೇಶಾನಂದ ಸೋಮಯಾಜಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನ್ಯಾಯಾಧೀಶರಾದ ರಮ್ಯಾಎಚ್.ಆರ್, ಶಿಲ್ಪಾ ಜಿ ತಿಮ್ಮಾಪುರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಕೀಲರ ಕಚೇರಿಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹಿರಿಯ ಕಚೇರಿ ಸಿಬ್ಬಂದಿಗಳಾದ ಪ್ರಭಾಕರ ಆಚಾರ್, ರವೀಂದ್ರ ಉಳ್ಳಾಲ್, ಜಯರಾಮ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾನೂನು ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ವಕೀಲರಾದ ಎಂ ಅಶ್ವಿನಿ ಕುಮಾರ್ ರೈ ಅವರು ಕಮರ್ಷಿಯಲ್ ಕಾನೂನು ಬಗ್ಗೆ ಮಾಹಿತಿ ನೀಡಿದರು. ವಕೀಲರಾದ ರವೀಂದ್ರ ಕುಕ್ಕಾಜೆ ಸ್ವಾಗತಿಸಿದರು. ರಾಧಿಕಾ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮವನ್ನು ವಕೀಲರಾದ ಗಿರೀಶ್ ಮುಳಿಯಾಲ ನಿರೂಪಿಸಿದರು.
| ಸಾಹಿತ್ಯದಿಂದ ಸಾಮರಸ್ಯ ಆಶಯ | ಎರಡು ದಿನ ವಿಚಾರ ಮಂಡನೆ, ಸಾಂಸ್ಕೃತಿಕ ಕಾರ್ಯಕ್ರಮ (more…)