ಬಂಟ್ವಾಳ

ಬಂಟ್ವಾಳ ವಕೀಲರ ಸಂಘದ ಆಶ್ರಯದಲ್ಲಿ ವಕೀಲರ ದಿನಾಚರಣೆ ಹಿನ್ನೆಲೆಯಲ್ಲಿ ಕಾನೂನು ಕಾರ್ಯಾಗಾರ

ಬಂಟ್ವಾಳನ್ಯೂಸ್ ವರದಿ www.bantwalnews.com REPORT

ಬಂಟ್ವಾಳ: ವಕೀಲರ ಸಂಘ (ರಿ ) ಬಂಟ್ವಾಳ ಆಶ್ರಯದಲ್ಲಿ ವಕೀಲರ ದಿನಾಚರಣೆ ಪ್ರಯುಕ್ತ ಕಾನೂನು ಕಾರ್ಯಗಾರ ಬಂಟ್ವಾಳದಲ್ಲಿ ಶುಕ್ರವಾರ ನಡೆಯಿತು.

ಹಿರಿಯ ಸಿವಿಲ್ ನ್ಯಾಯಾಧೀಶ  ಬಾಲಗೋಪಾಲಕೃಷ್ಣ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘ (ರಿ) ಬಂಟ್ವಾಳದ ಅಧ್ಯಕ್ಷರಾದ ಬಿ. ಗಣೇಶಾನಂದ ಸೋಮಯಾಜಿ ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ ನ್ಯಾಯಾಧೀಶರಾದ  ರಮ್ಯಾಎಚ್.ಆರ್, ಶಿಲ್ಪಾ ಜಿ ತಿಮ್ಮಾಪುರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಕೀಲರ ಕಚೇರಿಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ಹಿರಿಯ ಕಚೇರಿ ಸಿಬ್ಬಂದಿಗಳಾದ ಪ್ರಭಾಕರ ಆಚಾರ್, ರವೀಂದ್ರ ಉಳ್ಳಾಲ್, ಜಯರಾಮ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾನೂನು ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ವಕೀಲರಾದ ಎಂ ಅಶ್ವಿನಿ ಕುಮಾರ್ ರೈ ಅವರು ಕಮರ್ಷಿಯಲ್ ಕಾನೂನು ಬಗ್ಗೆ ಮಾಹಿತಿ ನೀಡಿದರು. ವಕೀಲರಾದ ರವೀಂದ್ರ ಕುಕ್ಕಾಜೆ ಸ್ವಾಗತಿಸಿದರು. ರಾಧಿಕಾ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮವನ್ನು ವಕೀಲರಾದ ಗಿರೀಶ್ ಮುಳಿಯಾಲ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ