ಬಂಟ್ವಾಳನ್ಯೂಸ್ ವರದಿ, www.bantwalnews.com REPORT
ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೇವಲ ಬಿಜೆಪಿ ಬೆಂಬಲಿತರಿಂದಷ್ಟೇ ಅಲ್ಲ, ಇತರ ಪಕ್ಷಗಳಿಂದಲೂ ಬೆಂಬಲ ವ್ಯಕ್ತವಾಗುತ್ತಿದೆ ಎಂದರು. ಈ ಸಂದರ್ಭ ಮಾತನಾಡಿದ ಸಚಿವ ಕೋಟ, ನನಗೆ ನಾಲ್ಕನೇ ಬಾರಿ ಚುನಾವಣೆ ಸ್ಪರ್ಧೆ ಮಾಡಲು ಅವಕಾಶ ನೀಡಿದೆ. ಗ್ರಾಮ ಪಂಚಾಯತ್ ಸದಸ್ಯನಾಗಿದ್ದಾಗ 20 ರೂ. ಇದ್ದ ಪಂಚಾಯತ್ ಸದಸ್ಯರ ಗೌರವಧನ ಏರಿಕೆಯಾಗಿದೆ. ಅದನ್ನು 2000 ರೂ. ಏರಿಸಲು ಮನವಿ ಮಾಡಿದ್ದು ಅದು ಮುಂದಿನ ದಿನಗಳಲ್ಲಿ ಜಾರಿಗೆ ಬರಲಿದೆ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಮತದಾನ ಪ್ರಕ್ರಿಯೆ ಕುರಿತು ಸ್ಪಷ್ಟ ಅರಿವು ಹೊಂದಿ, ಸಕಾಲದಲ್ಲಿ ಮತ ಚಲಾಯಿಸುವಂತೆ ಸೂಚನೆ ನೀಡಿದರು. ಇದೇ ವೇಳೆ ಆಮ್ಟಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಮತ್ತು ಸೌಮ್ಯ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಪಕ್ಷದ ನಾಯಕರು ಅವರಿಗೆ ಪಕ್ಷದ ಧ್ವಜವನ್ನು ಕೊಟ್ಟು ಪಕ್ಷಕ್ಕೆ ಬರಮಾಡಿಕೊಂಡರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪಕ್ಷ ಪ್ರಮುಖರಾದ ಉದಯ ಕುಮಾರ್ ಶೆಟ್ಟಿ, ಕೊರಗಪ್ಪ ನಾಯ್ಕ್, ಹರಿಕೃಷ್ಣ ಬಂಟ್ವಾಳ, ಸಂತೋಷ್ ರೈ ಬೋಳಿಯಾರ್, ಸತೀಶ್ ಕುಂಪಲ, ರಾಜೇಶ್ ಕಾವೇರಿ, ದೇವದಾಸ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ನಿತಿನ್ ಕುಮಾರ್, ಕಸ್ತೂರಿ ಪಂಜ, ಮಂಜುಳಾ ಆಚಾರ್ಯ, ಪೂಜಾ ಪೈ, ಈಶ್ವರ್ ಕಟೀಲು, ರಣದೀಪ್ ಕಾಂಚನ್ ಮತ್ತಿತರರು ಉಪಸ್ಥಿತರಿದ್ದರು. ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಸ್ವಾಗತಿಸಿದರು. ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಮತ್ತು ಬುಡ ಅಧ್ಯಕ್ಷ ದೇವದಾಸ ಶೆಟ್ಟಿ ಮತದಾನದ ಪ್ರಕ್ರಿಯೆ ಕುರಿತು ಮಾಹಿತಿ ನೀಡಿದರು. ಇನ್ನೋರ್ವ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು. ಕಿಶೋರ್ ಪಲ್ಲಿಪ್ಪಾಡಿ ವಂದೇ ಮಾತರಂ ಹಾಡಿದರು.