ಬಂಟ್ವಾಳನ್ಯೂಸ್ ವರದಿ, www.bantwalnews.com REPORT
ಬಿ.ಮೂಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ವತಿಯಿಂದ ಕಾನೂನು ಅರಿವು ಕಾರ್ಯಾಗಾರ ನಡೆಯಿತು.
ಬಂಟ್ವಾಳ ನಗರ ಪೊಲೀಸ್ ಠಾಣಾ ಉಪನಿರೀಕ್ಷಕ ಅವಿನಾಶ್ ಎಚ್. ಗೌಡ ಸೈಬರ್ ಅಪರಾಧ, ಮಹಿಳಾ ಸುರಕ್ಷತೆ, ಮಾದಕ ದ್ರವ್ಯ, ಸಾಮಾಜಿಕ ಜಾಲತಾಣಗಳ ಒಳಿತು ಕೆಡುಕು ಗಳ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ಸಂಚಾರ ಠಾಣೆ ಉಪನಿರೀಕ್ಷಕ ರಾಜೇಶ್ ರಸ್ತೆ ಸುರಕ್ಷತಾ ನಿಯಮ ಬಗ್ಗೆ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಕಾಲೇಜು ಪ್ರಿನ್ಸಿಪಾಲ್ ಯೂಸುಫ್ ವಹಿಸಿದ್ದರು. ಬಂಟ್ವಾಳ ನಗರ ಠಾಣಾ ಸಿಬ್ಬಂದಿ, ಉಪನ್ಯಾಸಕ ವೃಂದ ಉಸಸ್ಥಿತರಿದ್ದ ಕಾರ್ಯಕ್ರಮವನ್ನು ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ನೆರವೇರಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…