ಸರಪಾಡಿಯಲ್ಲಿ ದಿ.ಜನಾರ್ದನ ಭಂಡಾರಿ ಸ್ಮರಣಾರ್ಥ ಮುಕ್ತ ಹೊನಲು ಬೆಳಕಿನ ವಾಲಿಬಾಲ್

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ: ಸರಪಾಡಿ ಯುವಕ ಮಂಡಲದ ವತಿಯಿಂದ ವಾಲಿಬಾಲ್ ಆಟಗಾರ ದಿ, ಜನಾರ್ದನ ಭಂಡಾರಿ ಸರಪಾಡಿ ಅವರ ಸ್ಮರಣಾರ್ಥ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಸರಪಾಡಿಯಲ್ಲಿ ನಡೆಯಿತು.

ಶ್ರೀ ಶರಭೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಸರಪಾಡಿ ಉದ್ಘಾಟಿಸಿದರು. ಆಡಳಿತ ಮೊಕ್ತೇಸರ ವಿಠಲ್ ಎಂ.ಆರುಮುಡಿ ಅಧ್ಯಕ್ಷತೆ ವಹಿಸಿದ್ದರು.ಜಿ.ಪಂ.ಮಾಜಿ ಸದಸ್ಯ ಬಿ.ಪದ್ಮಶೇಖರ್ ಜೈನ್ ಹಾಗೂ ಬಂಟ್ವಾಳ ವಾಲಿಬಾಲ್ ಅಸೋಸಿಯೇಶನ್ ಅಧ್ಯಕ್ಷ ಸುಪ್ರೀತ್ ಆಳ್ವ ಕ್ರೀಡಾಂಗಣ ಉದ್ಘಾಟಿಸಿದರು. ದ.ಕ.ಜಿಲ್ಲಾ ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಟದ ಅಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ ಪ್ರಸ್ತಾವನೆಗೈದರು.

ಜಾಹೀರಾತು

ನಿವೃತ್ತ ಶಿಕ್ಷಕ ನರಸಿಂಹ ಐತಾಳ್ ಅರಮನೆ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ದಂತ ವೈದ್ಯ ಡಾ. ಬಾಲಚಂದ್ರ ಶೆಟ್ಟಿ ಮೀಯಾರು, ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಮೊಡಂಕಾಪು ಕಾರ್ಮೆಲ್ ಪ.ಪೂ.ಕಾಲೇಜಿನ ಉಪನ್ಯಾಸಕ ಸುರೇಶ್ ನಂದೊಟ್ಟು, ಕೂರ್ಯಾಳ ಶ್ರೀ ದುರ್ಗಾ ಸೇವಾ ಸಮಿತಿಯ ಅಧ್ಯಕ್ಷ ಅಮರನಾಥ ಶೆಟ್ಟಿ ಕೂರ್ಯಾಳ, ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಧಾಕೃಷ್ಣ ರೈ ಕೊಟ್ಟುಂಜ, ಗೌರವಾಧ್ಯಕ್ಷ ಎಸ್.ಪಿ.ಸರಪಾಡಿ ಉಪಸ್ಥಿತರಿದ್ದರು. ಯುವಕ ಮಂಡಲದ ಅಧ್ಯಕ್ಷ ಸಂತೋಷ್ ಶೆಟ್ಟಿ ಪಡ್ಡಾಯಿಬೆಟ್ಟು ಸ್ವಾಗತಿಸಿದರು.  ಸಮಾರೋಪ ಸಮಾರಂಭದಲ್ಲಿ ಸರಪಾಡಿ ಗ್ರಾ.ಪಂ.ಅಧ್ಯಕ್ಷೆ ಲೀಲಾವತಿ ಧರ್ಣಪ್ಪ ಪೂಜಾರಿ ಬಹುಮಾನ ವಿತರಿಸಿದರು. ಮಣಿನಾಲ್ಕೂರು ಗ್ರಾ.ಪಂ.ಸದಸ್ಯ ಪುರುಷೋತ್ತಮ ಪೂಜಾರಿ ಮಜಲು, ನರ್ಸರಿ ಉದ್ಯಮಿ ಚೇತನ್ ತಿರ್ತೊಟ್ಟು ಮೊದಲಾದವರಿದ್ದರು.ಪಂದ್ಯಾಟದಲ್ಲಿ ಹರೀಶ್ ಮಠದಬೆಟ್ಟು ಮಾಲಕತ್ವದ ಶ್ರೀ ಸರಪಾಡಿ ತಂಡ ವಿನ್ನರ್ಸ್ ಜಿರಸ್ ಅಜಿಲಮೊಗರು ರನ್ನರ್ಸ್ ಕೈರಂಗಳ ಎಸ್‌ಕೆಜಿಸಿ ತೃತೀಯ ಹಾಗೂ ಸರಪಾಡಿ ಯುವಕ ಮಂಡಲ ಚತುರ್ಥ ಬಹುಮಾನ ಪಡೆಯಿತು. ವರುಣ್ ಉಡುಪಿ ಬೆಸ್ಟ್ ಆ್ಯಟಕರ್, ಸರ್ಫುರಾಜ್ ಬೆಸ್ಟ್ ಸೆಟ್ಟರ್ ಹಾಗೂ ರಾಕಿ ಬೆಸ್ಟ್ ಆಲ್‌ರೌಂಡರ್ ಪ್ರಶಸ್ತಿ ಪಡೆದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸರಪಾಡಿಯಲ್ಲಿ ದಿ.ಜನಾರ್ದನ ಭಂಡಾರಿ ಸ್ಮರಣಾರ್ಥ ಮುಕ್ತ ಹೊನಲು ಬೆಳಕಿನ ವಾಲಿಬಾಲ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*