ಬಂಟ್ವಾಳನ್ಯೂಸ್ ವರದಿ, www.bantwalnews.com REPORT
ಸಿದ್ಧಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಲ್ಎಂಎಸ್ ಬಳಕೆ, ನಿರ್ವಹಣೆ ಕುರಿತ ಕಾರ್ಯಾಗಾರ ನಡೆಯಿತು.
ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಿದ್ಧಕಟ್ಟೆಯಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶದ ಆಶ್ರಯದಲ್ಲಿ “ಎಲ್ಎಂಎಸ್ ಬಳಕೆ ಹಾಗೂ ನಿರ್ವಹಣೆ” ಕುರಿತು ಕಾರ್ಯಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪ್ರೊ. ಸ್ಟೀವನ್ ಕ್ವಾಡ್ರೋಸ್, ವಿಶೇಷ ಅಧಿಕಾರಿಗಳು, ಕಾಲೇಜು ಶಿಕ್ಷಣ ಇಲಾಖೆ, ಜಂಟಿ ನಿರ್ದೇಶಕರ ಕಚೇರಿ ಮಾತನಾಡಿ ಎಲ್ಎಂಎಸ್ ಒಂದು ಡಿಜಿಟಲ್ ಕಲಿಕಾ ವ್ಯವಸ್ಥೆಯಾಗಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಎಲ್ಎಂಎಸ್ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು, ಅಲ್ಲಿರುವ ಜ್ಞಾನವನ್ನು ಬಳಸಿಕೊಂಡು ಬದುಕಿನ ಗುರಿಯನ್ನು ಸಾಧಿಸಬೇಕು ಎಂದರು. ಈ ಸಂದರ್ಭ ಅವರು, ಕಾಲೇಜಿನ ವಿವಿಧ ತರಗತಿಗಳಿಗೆ ಬೇಟಿಕೊಟ್ಟು ಅಲ್ಲಿನ ವಿದ್ಯಾರ್ಥಿಗಳಿಗೆ ಎಲ್ಎಂಎಸ್ ನ ವಿವಿಧ ಬಳಕೆಯ ಸಾಧ್ಯತೆಗಳನ್ನು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಿನ್ಸಿಪಾಲ್ ಸೌಮ್ಯ ಎಚ್. ಕೆ. ಎಲ್ಎಂಎಸ್ ವಿದ್ಯಾರ್ಥಿಗಳಿಗೆ ಸರಕಾರ ರೂಪಿಸಿಕೊಟ್ಟ ಉತ್ತಮ ವ್ಯವಸ್ಥೆಯಾಗಿದ್ದು, ಅದನ್ನು ನಾವೆಲ್ಲರೂ ಸದ್ಭಳಕೆ ಮಾಡಿಕೊಂಡಾಗಲೆ ಅದಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಗೌರವಿಸಿದಂತೆ ಆಗುತ್ತದೆ ಎಂದರು. ಕಾಲೇಜಿನ ಬೋಧಕ-ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡ ಕಾರ್ಯಕ್ರಮದಲ್ಲಿ, ಕಾಲೇಜಿನ ಎಲ್ಎಂಎಸ್ ಸಂಚಾಲಕ ವಿನಯ್ ಎಂ. ಎಸ್. ಸ್ವಾಗತಿಸಿ, ವಿದ್ಯಾರ್ಥಿ ಕಿಶೋರ್ ವಂದಿಸಿದರು. ವಿದ್ಯಾರ್ಥಿನಿ ಚೈತ್ರ ನಿರೂಪಿಸಿದ ಕಾರ್ಯಕ್ರಮದಲ್ಲಿ, ಅನುಷಾ ಪ್ರಾರ್ಥಿಸಿದರು.