ಬಂಟ್ವಾಳ

ಮಾಣಿಮಜಲು ದೈವಸ್ಥಾನ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಕಾರ್ಯಕ್ರಮಗಳು ಆರಂಭ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳನ್ಯೂಸ್ ವರದಿ, www.bantwalnews.com REPORT ಮಾಣಿಮಜಲು ಶ್ರೀ ನಾಲ್ಕೈತ್ತಾಯ ಪಂಜುರ್ಲಿ ದೈವಸ್ಥಾನ ಮತ್ತು ನಿರ್ಮಾಲ್ ಶ್ರೀ ಕಲ್ಲುರ್ಟಿ ಕಲ್ಕುಡ ಹಾಗೂ ರಕ್ತೇಶ್ವರಿ ದೈವಸ್ಥಾನದ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಕಾರ್ಯಕ್ರಮಗಳು ಆರಂಭಗೊಂಡಿದ್ದು, ಶುಕ್ರವಾರ ಹೊರೆಕಾಣಿಕೆ ಮೆರವಣಿಗೆ ವೈಭವಯುತವಾಗಿ ನಡೆದವು. ನರಿಕೊಂಬು ಶ್ರೀ ನಾರಿಕುಂಭೇಶ್ವರ ದೇವಸ್ಥಾನದಿಂದ ಹೊರೆಕಾಣಿಕೆ ಸಹಿತ ಭಂಡಾರದಮನೆಯಿಂದ ಶ್ರೀ ದೈವಗಳ ಭಂಡಾರ ಹೊರಟು ಮಾಣಿಮಜಲು ದೈವಸ್ಥಾನಕ್ಕೆ ತಲುಪಿತು.

ಬಳಿಕ ಮಾತನಾಡಿದ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮತ್ತು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ವಾಸ್ತುಶಿಲ್ಪಿ ಬೆದ್ರಡ್ಕ ಶ್ರೀ ರಮೇಶ ಕಾರಂತರ ಮಾರ್ಗದರ್ಶನದಲ್ಲಿ ಪುನರ್ ನಿರ್ಮಾಣಗೊಂಡ ಸಾನಿಧ್ಯದಲ್ಲಿ ಸ್ಥಳೀಯ ತಂತ್ರಿಗಳಾದ ವಾಸುದೇವ ಕಾರಂತರ ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. 26ರಂದು ಶ್ರೀ ನಾಲ್ಕೈತ್ತಾಯ ಪಂಜುರ್ಲಿ ದೈವಗಳ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ 29ರಂದು ನಿರ್ಮಾಲ್ ಸ್ಥಾನದಲ್ಲಿ ಶ್ರೀ ರಕ್ತೇಶ್ವರಿ ಕಲ್ಲುರ್ಟಿ ಕಲ್ಕುಡ ದೈವಗಳ ಪ್ರತಿಷ್ಠೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. 24ರಿಂದ ಆರಂಭಗೊಂಡ ಕಾರ್ಯಕ್ರಮಗಳು 29ನೇ ಬುಧವಾರದವರೆಗೆ ನಡೆಯಲಿವೆ. 26ರಂದು ಬೆಳಗ್ಗೆ ಧಾರ್ಮಿಕ ಸಭೆ ನಡೆಯಲಿದ್ದು, ಶಾಸಕ ರಾಜೇಶ್ ನಾಯ್ಕ್, ಸಚಿವರಾದ ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ ಪೂಜಾರಿ, ಅಂಗಾರ, ಸಂಸದ ನಳಿನ್ ಶಾಸಕ ರಾಜೇಶ್ ನಾಯ್ಕ್ ಸಹಿತ ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ ಎಂದರು. ಮೆರವಣಿಗೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮತ್ತು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್, ಜೀರ್ಣೊದ್ಧಾರ ಸಮಿತಿ ಅಧ್ಯಕ್ಷ ಎನ್.ಪ್ರಕಾಶ ಕಾರಂತ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ರಘು ಸಪಲ್ಯ, ಪ್ರಧಾನ ಕಾರ್ಯದರ್ಶಿ ಕೃಷ್ಣಪ್ಪ ಗಾಣಿಗ, ಸಂಚಾಲಕ ಎನ್. ಪದ್ಮನಾಭ ಮಯ್ಯ, ಕೋಶಾಧಿಕಾರಿ ರಮೇಶ್ ಬೋರುಗುಡ್ಡೆ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಅಂತರ, ಪ್ರಮುಖರಾದ ಪುರುಷೋತ್ತಮ ಸಾಲ್ಯಾನ್ ನರಿಕೊಂಬು, ಕಮಲಾಕ್ಷಿ ಪೂಜಾರಿ, ಕೊರಗಪ್ಪ ಬಂಗೇರ, ನಿತಿನ್ ಶೆಟ್ಟಿ, ಉದಯಕುಮಾರ್ ಶೆಟ್ಟಿ ಹೊಸಲಚ್ಚಿಲ್ ಉಪಸ್ಥಿತರಿದ್ದರು.

Harish Mambady

ಕಳೆದ 26 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ.

Recent Posts