![](https://i0.wp.com/bantwalnews.com/wp-content/uploads/2021/11/WhatsApp-Image-2021-11-14-at-17.57.29.jpeg?resize=629%2C1024&ssl=1)
![](https://i0.wp.com/bantwalnews.com/wp-content/uploads/2021/12/WhatsApp-Image-2021-12-21-at-09.43.30.jpeg?resize=722%2C1024&ssl=1)
![](https://i0.wp.com/bantwalnews.com/wp-content/uploads/2021/07/aaniya-darbar.jpeg?resize=456%2C640&ssl=1)
![](https://i0.wp.com/bantwalnews.com/wp-content/uploads/2021/11/BANTWALNEWS.jpg?resize=731%2C432&ssl=1)
ಬಂಟ್ವಾಳನ್ಯೂಸ್ ವರದಿ, www.bantwalnews.com REPORT
![](https://i0.wp.com/bantwalnews.com/wp-content/uploads/2021/12/IMG-20211225-WA0017.jpg?resize=640%2C427&ssl=1)
ಬಂಟ್ವಾಳ: ಮತಾಂತರ ಜಾಲ ಮತ್ತು ಡ್ರಗ್ಸ್ ಮಾಫಿಯಾ ಜಾಲದಿಂದ ನಮ್ಮ ಮಕ್ಕಳನ್ನು ಸಂರಕ್ಷಣೆ ಮಾಡುವ ಅಗತ್ಯ ಇದೆ ಎಂದು ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಶ್ರೀ ಮಹಾಗಣಪತಿ ದೇವಸ್ಥಾನ ಬೊಂಡಾಲದಲ್ಲಿ ಮಹಾಗಣಪತಿ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಅಂಗವಾಗಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಅಶ್ರೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ಮಾಜಿ ಶಾಸಕ ಎ.ರುಕ್ಮಯ ಪೂಜಾರಿ ವಹಿಸಿದ್ದರು, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಉದ್ಯಮಿ ರಘು ಎಲ್ ಶೆಟ್ಟಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಉದ್ಯಮಿ ಐತಪ್ಪ ಆಳ್ವ, ಉದ್ಯಮಿ ಜಿತೇಂದ್ರ ಎಸ್.ಕೊಟ್ಟಾರಿ , ಕಾಂಪ್ರಬೈಲು ಉಳ್ಳಾಲ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಾನಂದ ಆಚಾರ್ಯ, ಗುತ್ತಿಗೆದಾರ ಗೋಪಾಲ ಮೂಲ್ಯ , ಆಡಳಿತ ಮೊಕ್ತೇಸರ ಜಯರಾಮ ಹೊಳ್ಳ ನಗ್ತಿಮಾರ್, ಪ್ರಮುಖರಾದ ವಿನೋದ್ ಶೆಟ್ಟಿ ಬೊಂಡಾಲ, ಜನಾರ್ದನ ಬೊಂಡಾಲ, ದಿನೇಶ್ ಅಮ್ಟೂರು, ನಾಗೇಶ್ ಕಲ್ಲಡ್ಕ ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ನಾಗೇಶ್ ಶೆಟ್ಟಿ ವಂದಿಸಿದರು ರಾಜೇಶ್ ಕೊಟ್ಟಾರಿ, ಜಿನ್ನಪ್ಪ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಮತಾಂತರ, ಡ್ರಗ್ ಮಾಫಿಯಾದಿಂದ ಮಕ್ಕಳನ್ನು ರಕ್ಷಿಸಿ: ಬೊಂಡಾಲ ಬ್ರಹ್ಮಕಲಶೋತ್ಸವದಲ್ಲಿ ಮಾಣಿಲ ಸ್ವಾಮೀಜಿ"