ಬೊಂಡಾಲ ಶ್ರೀ ಮಹಾಗಣಪತಿ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ಸಂಪನ್ನ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ: ಬೊಂಡಾಲ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಭಾನುವಾರ ಸಂಪನ್ನಗೊಂಡವು. ಬೆಳಗ್ಗೆ 10.09ರ ಕುಂಭ ಲಗ್ನದಲ್ಲಿ ಅಷ್ಟೋತ್ತರ ಶತನಾಳಿಕೇರ ಶ್ರೀ ಮಹಾಗಣಪತಿ ಯಾಗ, ಶ್ರೀ ದೇವರಿಗೆ ಪಂಚವಿಂಶತಿ ದ್ರವ್ಯಾತ್ಮ್ಕ ಪರಿಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ ನಡೆಯಿತು. ವೇ.ಮೂ.ಮುನಿಯೂರು ಕುಮಾರಸುಬ್ರಹ್ಮಣ್ಯ ಭಟ್ಟರ ದಿವ್ಯಹಸ್ತದಿಂದ ಮಾದಕಟ್ಟೆ ಈಶ್ವರ ಭಟ್ಟರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪದ್ಮನಾಭ ಕೊಟ್ಟಾರಿ, ಆಡಳಿತ ಮೊಕ್ತೇಸರ ಜಯರಾಮ ಹೊಳ್ಳ ನಾಗ್ತಿಮಾರ್, ವಿವಿಧ ಸಮಿತಿಗಳ ಪ್ರಮುಖರಾದ ಜನಾರ್ದನ ಕುಲಾಲ್, ಬೊಂಡಾಲ ವಿನೋದ್ ಕುಮಾರ್ ಶೆಟ್ಟಿ, ನಾಗೇಶ್ ಕಲ್ಲಡ್ಕ, ನಾಗೇಶ್ ಶೆಟ್ಟಿ ಬೊಂಡಾಲ, ದಿನೇಶ್ ಅಮ್ಟೂರು, ರಾಜಾರಾಮ ಐತಾಳ, ವಜ್ರನಾಥ ಕಲ್ಲಡ್ಕ, ಶಂಕರನಾರಾಯಣ ಐತಾಳ್, ದಯಾನಂದ ಕುಮಾರ್ ಬೊಂಡಾಲ ಸಹಿತ ವಿವಿಧ ಸಮಿತಿಗಳ ಸದಸ್ಯರು, ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಸಚಿವ ಎಸ್.ಅಂಗಾರ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಹಿತ ವಿವಿಧ ಗಣ್ಯರು ಭೇಟಿ ನೀಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ,‌ ಪುತ್ತೂರಿನ ಉದ್ಯಮಿ ಸಂಜೀವ ಆಳ್ವ, ಕೂರಿಯಾಳ ದೇವಸ್ಥಾನದ ಸಮಿತಿ ಅಧ್ಯಕ್ಷ ರವಿಶಂಕರ ಶೆಟ್ಟಿ ಬಡಾಜೆಗುತ್ತು, ಕರ್ಣಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ರಾಜಾ ಬಿ.ಎಸ್., ಉದ್ಯಮಿ ಸುಧಾಕರ ಅಚಾರ್ಯ ಮಾರ್ನಬೈಲು ಉಪಸ್ಥಿತರಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಸ್ವಾಗತಿಸಿದರು. ಶ್ರೀನಿವಾಸ ಪೂಜಾರಿ ಮೆಲ್ಕಾರ್ ವಂದಿಸಿದರು.  ನಿತೀಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬೊಂಡಾಲ ಶ್ರೀ ಮಹಾಗಣಪತಿ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮ ಸಂಪನ್ನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*