ಬಂಟ್ವಾಳ

ಸಜಿಪಮುನ್ನೂರು ಗ್ರಾಮಸ್ಥರಿಗೆ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸಿದ ಬಳಿಕವಷ್ಟೇ ಪೈಪ್ ಲೈನ್ ಸಾಗಲು ಅವಕಾಶ, ಇಲ್ಲದಿದ್ದರೆ ತೀವ್ರ ಹೋರಾಟ – ಎಸ್.ಡಿ.ಪಿ.ಐ. ಎಚ್ಚರಿಕೆ

ಬಂಟ್ವಾಳನ್ಯೂಸ್ ವರದಿ, www.bantwalnews.com REPORT

ಬಂಟ್ವಾಳ: ನೇತ್ರಾವತಿ ನದಿಯಿಂದ ಉಳ್ಳಾಲ ಮತ್ತು ಕೋಟೆಕಾರಿಗೆ ಕುಡಿಯುವ ನೀರು ಪೂರೈಕೆ ಮಾಡುವ ಪೈಪ್ ಅಳವಡಿಕೆ ಕಾಮಗಾರಿ ಸಜಿಪಮುನ್ನೂರು ಗ್ರಾಮದಲ್ಲಿ ಆರಂಭಿಸಬೇಕಾದರೆ, ಮೊದಲು ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಹಾಗೂ ಕಾನೂನು ಹೋರಾಟ ನಡೆಸಲಾಗುವುದು, ಕಾಮಗಾರಿ ಆರಂಭಿಸಲು ಅವಕಾಶ ನೀಡುವುದಿಲ್ಲ‌ ಎಂದು ಎಸ್.ಡಿ.ಪಿ.ಐ. ಸಜಿಪಮುನ್ನೂರು ಗ್ರಾಮ ಸಮಿತಿ ಎಚ್ಚರಿಸಿದೆ.

ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಡಿ.ಪಿ.ಐ. ಗ್ರಾಮ ಸಮಿತಿ ಅಧ್ಯಕ್ಷ ಹಂಝ ನಂದಾವರ ಮತ್ತು ಮುಖಂಡ ಮಲಿಕ್ ಕೊಳಕೆ, ಉಳ್ಳಾಲ ನಗರಸಭೆ ಮತ್ತು ಕೋಟೆಕಾರ್ ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಕುಡಿಯುವ ನೀರು ಪೂರೈಕೆಗೆ 198 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ನಡೆಯುತ್ತಿದೆ. ಇದರ ಜಾಕ್ ವೆಲ್ ಸಜೀಪಮುನ್ನೂರು ಗ್ರಾಮದ ಆಲಾಡಿ ಎಂಬಲ್ಲಿನ ನೇತ್ರಾವತಿ ತಟದಲ್ಲಿ ಇದೆ. ಈ ಯೋಜನೆಯ ಕಾಮಗಾರಿ ಆರಂಭದ ಸಮಯದಲ್ಲಿ ಈ ಯೋಜನೆಯಲ್ಲಿ ಸಜಿಪಮುನ್ನೂರು ಗ್ರಾಮಕ್ಕೂ ನೀರು ಕೊಡಬೇಕೆಂದು ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡ ಸಂದರ್ಭ, ಅಧಿಕಾರಿಗಳು, ಜನಪ್ರತಿನಿಧಿಗಳು ನೀರು ಪೂರೈಸುವ ಕುರಿತು ಭರವಸೆ ನೀಡಿದ್ದರು. ಈ ಹಿಂದೆಯೂ ಕರೋಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಸಂದರ್ಭ ಸಜಿಪಮುನ್ನೂರಿಗೆ ನೀರು ಕಲ್ಪಿಸುವ ಕುರಿತು ಕೊಟ್ಟ ಆಶ್ವಾಸನೆ ಈಡೇರಿಲ್ಲ. ಆಲಾಡಿ ಜಾಕ್‌ವೆಲ್‌ನಿಂದ ಸುಭಾಷ್‌ ನಗರದವರೆಗಿನ ಪೈಪ್‌ಲೈನ್‌ ಕಾಮಗಾರಿ ಬಾಕಿ ಇದೆ. ಈ ಕಾಮಗಾರಿ ಆರಂಭಿಸಬೇಕಾದರೆ ಮುಡಿಪುವಿನಿಂದ ಸಜಿಪಮುನ್ನೂರು ಗ್ರಾಮದವರೆಗೆ ಗ್ರಾಮಕ್ಕೆ ನೀರು ಕೊಡುವ ಪೈಪ್ ಮೊದಲ ಅಳವಡಿಸಬೇಕು. ಇಲ್ಲದಿದ್ದರೆ ಸಜಿಪಮುನ್ನೂರು ಗ್ರಾಮದಲ್ಲೇ ನೀರು ಶುದ್ದೀಕರಣ ಘಟಕ ನಿರ್ಮಿಸಿ ಗ್ರಾಮಕ್ಕೆ ಕುಡಿಯುವ ನೀರು ಕೊಡಬೇಕು. ಇಲ್ಲದಿದ್ದರೆ ಗ್ರಾಮಸ್ಥರು ಸೇರಿ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು. ಎಸ್.ಡಿ.ಪಿ.ಐ. ಬಂಟ್ವಾಳ ಸಂಘಟನಾ ಕಾರ್ಯದರ್ಶಿ ಮಜೀದ್ ಆಲಡ್ಕ, ಬೂತ್ ಅಧ್ಯಕ್ಷ ಫಾರೂಕ್ ಆಲಾಡಿ, ಸಜಿಪಮುನ್ನೂರು ಗ್ರಾಪಂ ಸದಸ್ಯ ಸಿದ್ಧೀಕ್ ನಂದಾವರ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts