ಕಲ್ಲಡ್ಕ

ಮಾಣಿ ಗ್ರಾಪಂನಲ್ಲಿ ವಿವಿಧ ಯೋಜನೆಗಳ ತರಬೇತಿ ಕಾರ್ಯಕ್ರಮ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಬಂಟ್ವಾಳ: ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಝೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ಬಂಟ್ವಾಳ ತಾಲೂಕು ಪಂಚಾಯತ್ ಇವರ ಸಹಯೋಗದೊಂದಿಗೆ, ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮೀಣ ಬಡತನ ನಿವಾರಣಾ ಯೋಜನೆ, ಮಿಷನ್ ಅಂತ್ಯೋದಯ ಮತ್ತು ಜನರ ಯೋಜನೆ ಜನರ ಅಭಿವೃದ್ಧಿ ಮುಖಾಮುಖಿ ತರಬೇತಿ ಕಾರ್ಯಕ್ರಮ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಅಧ್ಯಕ್ಷತೆ ವಹಿಸಿ  ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷ  ಬಾಲಕೃಷ್ಣ ಆಳ್ವ ಕೊಡಾಜೆ, ತರಬೇತಿ ಎನ್ನುವುದು ನಿಂತ ನೀರಲ್ಲ,  ಅದು ಹರಿಯುತ್ತಿರುವ ನೀರು. ತರಬೇತಿಯಲ್ಲಿ ಸಿಗುವ ಅತೀ ಅಮೂಲ್ಯವಾದ ವಿಚಾರಗಳನ್ನು ಜೀವನದಲ್ಲಿ ಅಳವಡಿಸುವ ಮೂಲಕ ಗ್ರಾಮದ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಹೇಳಿದರು.

ಜಾಹೀರಾತು

 ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ತರಬೇತುದಾರ ಉಮಾನಾಥ ಶೆಟ್ಟಿ ಪೆರ್ನೆ, ಮೂಲಭೂತ ಸೌಕರ್ಯಗಳನ್ನು ಪಡೆಯುವ ಮತ್ತು ಉಳಿಸಿ ಬೆಳೆಸಿಕೊಳ್ಳುವ ಜವಾಬ್ದಾರಿ ಜನಪ್ರತಿನಿಧಿಗಳ ಜೊತೆಗೆ ಸಾರ್ವಜನಿಕರಿಗೂ ಇದೆ. ಪಂಚಾಯತ್ ಆಡಳಿತದೊಂದಿಗೆ ಎಲ್ಲರೂ ಕೈಜೋಡಿಸಬೇಕು ಎಂದರು.  ವಿವಿಧ ಸ್ತ್ರೀಶಕ್ತಿ ಸಂಘಟನೆಗಳ ಸದಸ್ಯರಿಗೆ ತರಬೇತಿ ನಡೆಯಿತು.  ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ನಾರಾಯಣ ಶೆಟ್ಟಿ, ಮಿತ್ರಾಕ್ಷಿ ಉಪಸ್ಥಿತರಿದ್ದರು.  ಪಂಚಾಯತ್ ಅಭಿವೃದ್ಧಿ ಗಿರಿಜಾ ಸ್ವಾಗತಿಸಿದರು. ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts