ಸಿದ್ಧಕಟ್ಟೆಯಲ್ಲಿ ಕುಂಬಾರರ ಗುಡಿಕೈಗಾರಿಕಾ ಸಹಕಾರ ಸಂಘದ 12ನೇ ಶಾಖೆ ಆರಂಭ

www.bantwalnews.com Report ಬಂಟ್ವಾಳನ್ಯೂಸ್ ವರದಿ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ನಿಯಮಿತ ಪುತ್ತೂರು ಇದರ 12ನೇ ಶಾಖೆ ಸಿದ್ಧಕಟ್ಟೆಯಲ್ಲಿ ಜನವರಿ 7ರಂದು ಭೂಮಿ ಕಾಂಪ್ಲೆಕ್ಸ್ ನಲ್ಲಿ ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಈ ವಿಷಯವನ್ನು ಬ್ಯಾಂಕಿನ ಅಧ್ಯಕ್ಷ ಭಾಸ್ಕರ ಎಂ.ಪೆರುವಾಯಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ತಿಳಿಸಿದರು.

ಜಾಹೀರಾತು

ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲನೆ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶಾಖೆ ಉದ್ಘಾಟನೆ ಮಾಡಲಿದ್ದು, ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಗಣಕಯಂತ್ರವನ್ನು ಉದ್ಘಾಟಿಸುವರು. ಸಂಗಬೆಟ್ಟು ಗ್ರಾಪಂ ಅಧ್ಯಕ್ಷ ಸತೀಶ್ ಪೂಜಾರಿ ಭದ್ರತಾ ಕೊಠಡಿ ಉದ್ಘಾಟಿಸುವರು ಎಂದು ತಿಳಿಸಿದರು. ಶಾಖೆ ಪ್ರಾರಂಭದ ಪ್ರಯುಕ್ತ ವಿಶೇಷ ಠೇವಣಿ ಯೋಜನೆಯನ್ನು ರೂಪಿಸಲಾಗಿದ್ದು, 1 ವರ್ಷದ ಠೇವಣಿಗೆ 0.25 ಶೇಕಡಾ ಹೆಚ್ಚುವರಿ ಬಡ್ಡಿದರವನ್ನು ಒದಗಿಸಲಾಗುವುದು, ಹಿರಿಯ ನಾಗರಿಕರ, ವಿಧವೆಯರ ಮತ್ತು ಸಂಘ, ಸಂಸ್ಥೆಗಳ 180 ದಿನಗಳಿಗಿಂತ ಹೆಚ್ಚಿನ ಅವಧಿಯ ಠೇವಣಿಗಳಿಗೆ 0.5 ಶೇ. ಹೆಚ್ಚುವರಿ ಬಡ್ಡಿದರ ನೀಡಲಾಗುತ್ತದೆ. ಗೃಹನಿರ್ಮಾಣ, ವಾಹನ ಖರೀದಿ, ಆಸ್ತಿ ಅಡಮಾನ, ಗ್ರಾಮೀಣ ಗುಡಿ ಕೈಗಾರಿಕೆಗಳಿಗೆ ಪ್ರೋತ್ಸಾಹಕ್ಕಾಗಿ ನೆರವು, ಚಿನ್ನಾಭರಣ ಈಡಿನ ಸಾಲವನ್ನು ಕಡಿಮೆ ಬಡ್ಡಿದರದಲ್ಲಿ ನೀಡಲಾಗುತ್ತದೆ. ಬ್ಯಾಂಕಿನಲ್ಲಿ ಗುಡಿಕೈಗಾರಿಕಾ ವಸ್ತುಗಳ ಮಾರಾಟ ಮಳಿಗೆಯೂ ಇರಲಿದೆ ಎಂದರು.ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜನಾರ್ದನ ಮೂಲ್ಯ, ನಿರ್ದೇಶಕರಾದ ಪ್ರಶಾಂತ್ ಬಂಜನ್, ಸೇಸಪ್ಪ ಕುಲಾಲ್ ಮತ್ತು ಬಂಟ್ವಾಳ ತಾಲೂಕು ಕುಲಾಲ ಸುಧಾರಕರ ಸಂಘದ ಅಧ್ಯಕ್ಷ ನಾರಾಯಣ ಸಿ.ಪೆರ್ನೆ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸಿದ್ಧಕಟ್ಟೆಯಲ್ಲಿ ಕುಂಬಾರರ ಗುಡಿಕೈಗಾರಿಕಾ ಸಹಕಾರ ಸಂಘದ 12ನೇ ಶಾಖೆ ಆರಂಭ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*