ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮನವಿ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಬಂಟ್ವಾಳ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರಿಗೆ ಶಾಸಕರ ಕಚೇರಿ ಮುಂಭಾಗ ಗುರುವಾರ ಮನವಿ ಸಲ್ಲಿಸಲಾಯಿತು.

ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಮತ್ತು ಭತ್ಯೆಯನ್ನು ನೀಡುವುದು, ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡುವುದು, ಸಮಾನ ಕೆಲಸಕ್ಕೆ ಸಮಾನ ವೇತನ ತತ್ವವನ್ನು ಪಾಲಿಸುವುದು, ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರು ಮತ್ತು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನಹರಿಸುವ ವಿಚಾರವಾಗಿ ಸರ್ಕಾರದ ಗಮನ ಸೆಳೆಯಲು ಪ್ರತಿ ಶಾಸಕರಿಗೂ ಆಯಾ ತಾಲೂಕುಗಳಲ್ಲಿ ಮನವಿ ಸಲ್ಲಿಸಲಾಗುತ್ತಿದ್ದು, ಅದರಂತೆ ಬಂಟ್ವಾಳ ಶಾಸಕರಿಗೂ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು, ಉಪಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಖಜಾಂಚಿ ಬಸಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಶಿವಪ್ರಸಾದ ಶೆಟ್ಟಿ ಉಪಾಧ್ಯಕ್ಷ ನವೀನ್ ಪಿ.ಎಸ್., ತಾಲೂಕು ಅಧ್ಯಕ್ಷ ಜಯರಾಮ್, ಕಂದಾಯ ಇಲಾಖಾ ನೌಕರರ ಸಂಘದ ಸೀತಾರಾಮ ಪೂಜಾರಿ, ಸಂಘಟನಾ ಕಾರ್ಯದರ್ಶಿ ಮಲ್ಲೇಶ್, ಆರೋಗ್ಯ, ಶಿಕ್ಷಣ, ತಾಪಂ ಸಹಿತ  ವಿವಿಧ ಇಲಾಖೆಗಳ ಪ್ರಮುಖರಾದ ಯಮುನಪ್ಪ, ಇಂದುಶೇಖರ್, ಯತೀಶ್, ಪುಟ್ಟರಂಗನಾಥ್, ಕೃಷ್ಣಮೂರ್ತಿ, ರತ್ನಾವತಿ, ಮಹೇಂದ್ರ, ಸತ್ಯನಾರಾಯಣ,  ವೀಣಾ ಭಾಸ್ಕರ್ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.

About the Author

Harish Mambady
ಕಳೆದ 26 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ.

Be the first to comment on "ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಮನವಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*