?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
www.bantwalnews.com Report ಬಂಟ್ವಾಳನ್ಯೂಸ್ ವರದಿ
ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಫೆ.9ರಿಂದ 14ರವರೆಗೆ ನಡೆಯಲಿರುವ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ ನಡೆಯಿತು. ವ್ಯವಸ್ಥಾಪನಾ ಸಮಿತಿಯ ಹಿರಿಯ ಸದಸ್ಯ ಬಾಬು ಪೂಜಾರಿ ಬಿಡುಗಡೆಗೊಳಿಸಿದರು. ಬಳಿಕ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.
ಸಜಿಪಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರು ದೇವತಾ ಸನ್ನಿಧಿಯಲ್ಲಿ ಪ್ರಾರ್ಥಿಸಿ, ಕಾರ್ಯಕ್ರಮವು ನಿರ್ವಿಘ್ನವಾಗಿ ನೆರವೇರಲಿ ಎಂದು ಶುಭ ಹಾರೈಸಿದರು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ ಪುಣ್ಕೆಮಜಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ರಾಧಾಕೃಷ್ಣ ಆಳ್ವ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಆರಾಧನಾ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ, ಅರ್ಚಕ ಗಣಪತಿ ಎಂ. ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರವೀಣ್ ಭಂಡಾರಿ, ಹರೀಶ್ ಬಂಗೇರ, ಪುರುಷೋತ್ತಮ್, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷರಾದ ಸುನೀತಾ ಚಂದ್ರಕುಮಾರ್ ಶೆಟ್ಟಿ, ಉಪಾಧ್ಯಕ್ಷ ಸುಧಾಕರ ಕೆ.ಟಿ, ಕಾರ್ಯದರ್ಶಿ ಸುರೇಶ್ ಬಂಗೇರ, ಜತೆ ಕಾರ್ಯದರ್ಶಿ ನಿತಿನ್ ಅರಸ, ಕೋಶಾಧಿಕಾರಿ ಜಿ.ರಾಮಕೃಷ್ಣ ಭಟ್, ಸದಸ್ಯರಾದ ಯತೀಶ್ ಶೆಟ್ಟಿ ಮಾಡಂತಾಡಿ, ಕಿಶನ್ ಪ್ರಸಾದ್ ಶೇಣವ, ರಾಮ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಪದ್ಮನಾಭ ಭಟ್ ಮಿತ್ತೋಟ, ಗೌರವ ಸಲಹೆಗಾರರಾದ ಶಿವರಾಮ ಭಂಡಾರಿ ಬಿಜಂತಾಡಿಗುತ್ತು, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಆಳ್ವ, ಉಪಾಧ್ಯಕ್ಷರಾದ ಅಶೋಕ್ ಪಕ್ಕಳ ವಾಮದಪದವು, ಭಕ್ತಕುಮಾರ್ ಶೆಟ್ಟಿ ದೋಟ, ಸ್ಮರಣ ಸಂಚಿಕೆ ಸಮಿತಿ ಸಹಸಂಪಾದಕಿ ರಮಾ ಎಸ್. ಭಂಡಾರಿ ಸಹಿತ ವಿವಿಧ ಸಮಿತಿಗಳ ಪ್ರಮುಖರು, ಪದಾಧಿಕಾರಿಗಳ ಸಹಿತ ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.
(more…)