www.bantwalnews.com Report ಬಂಟ್ವಾಳನ್ಯೂಸ್ ವರದಿ
ಬಂಟ್ವಾಳ: ಬಿ.ಸಿ.ರೋಡ್ ರೈಲ್ವೆ ನಿಲ್ದಾಣ ಪಕ್ಕದಲ್ಲಿ ಸೋಮವಾರ ರಾತ್ರಿ ವ್ಯಕ್ತಿಯೊಬ್ಬರು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಸುಮಾರು 8 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬರು ಗೂಡ್ಸ್ ರೈಲು ಸಂಚರಿಸುತ್ತಿದ್ದ ವೇಳೆ ರೈಲಿನಡಿ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ. ಘಟನೆಯಿಂದ ರುಂಡ, ಮುಂಡ ಬೇರ್ಪಟ್ಟಿದ್ದು, ವ್ಯಕ್ತಿಯ ಕುರಿತು ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಶವವನ್ನು ಆಂಬುಲೆನ್ಸ್ ನಲ್ಲಿ ಕೊಂಡೊಯ್ಯುವ ಪ್ರಕ್ರಿಯೆ ನಡೆಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ – ಘಟನೆಯಿಂದ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶವ"