www.bantwalnews.com Report ಬಂಟ್ವಾಳನ್ಯೂಸ್ ವರದಿ
ಕಲ್ಲಡ್ಕದ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ದ.ಕ.ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಅಂತರ್ಕಾಲೇಜು ಫೆಸ್ಟ್ ಆಜಾದಿ ಪರ್ವದ ಹೆಸರಿನಲ್ಲಿ ನಡೆಯಿತು.
ರಾಷ್ಟ್ರೀಯ ಭಾವ ಜಾಗೃತಿಯ ಉದ್ದೇಶವನ್ನು ಇಟ್ಟುಕೊಂಡು ನಡೆದ ಈ ಕಾರ್ಯಕ್ರಮದಲ್ಲಿ 18 ಕಾಲೇಜುಗಳಿಂದ 410ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿ, ಶಿಕ್ಷಣದೊಂದಿಗೆ ರಾಷ್ಟ್ರೀಯತೆಯನ್ನು ಕಲಿಸುವ ವಾತಾವರಣವನ್ನು ಇಲ್ಲಿ ನಿರ್ಮಿಸಲಾಗಿದೆ ಎಂದರು. ಮುಖ್ಯ ಅತಿಥಿಯಾಗಿ ಧಾರ್ಮಿಕ ಪರಿಷತ್ತು ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್ ಭಾಗವಹಿಸಿದ್ದರು. ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಆಡಳಿತ ಮಂಡಳಿ ಸದಸ್ಯೆ ಲಕ್ಷ್ಮೀ ರಘುರಾಜ್, ವಿಶೇಷ ಆಹ್ವಾನಿತ ಸಂದೇಶ್ ನೀರುಮಾರ್ಗ, ಪದವಿ ಪ್ರಾಚಾರ್ಯ ಕೃಷ್ಣಪ್ರಸಾದ್ ಕಾಯರ್ಕಟ್ಟೆ, ಫೆಸ್ಟ್ ಸಂಯೋಜಕಿ ವಿದ್ಯಾಶ್ರೀ ಉಪಸ್ಥಿತರಿದ್ದರು. ಹಿತೇಶ್ ಸ್ವಾಗತಿಸಿದರು. ಉಪನ್ಯಾಸಕಿ ಜಯಲಕ್ಷ್ಮೀ ವಂದಿಸಿದರು. ಹರ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಕಲ್ಲಡ್ಕ ಶ್ರೀರಾಮ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಅಂತರ್ಕಾಲೇಜು ಫೆಸ್ಟ್"