www.bantwalnews.com Report ಬಂಟ್ವಾಳನ್ಯೂಸ್ ವರದಿ
ಬಂಟ್ವಾಳ: ಎನ್ನೆಸ್ಸೆಸ್ ಕಾರ್ಯಕ್ರಮಕ್ಕೆ ಆನ್ಲೈನ್ ಮೂಲಕ ಚಾಲನೆ ನೀಡಲಾಗಿದ್ದು, ಅಮ್ಟಾಡಿ ಗ್ರಾಪಂನಲ್ಲಿ ಕಾಮಾಜೆಯ ಸರ್ಕಾರಿ ಕಾಲೇಜಿನ ಎನ್ನೆಸ್ಸೆಸ್ ಘಟಕದ ಶಿಕ್ಷಕರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು. ರಾಜ್ಯ ಸರ್ಕಾರದ ಅಮೃತ ಅಭಿವೃದ್ಧಿ ಯೋಜನೆಯಡಿ ಅಮ್ಟಾಡಿ ಗ್ರಾಮ ಪಂಚಾಯತ್ ರಾಷ್ಟ್ರೀಯ ಯೋಜನಾ ಘಟಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳದ ದತ್ತು ಗ್ರಾಮ ವ್ಯಾಪ್ತಿಗೆ ಬರುತ್ತದೆ. ಎನ್ನೆಸ್ಸೆಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಈ ಪಂಚಾಯತ್ ವ್ಯಾಪ್ತಿಯಲ್ಲಿರುತ್ತದೆ ರಾಜ್ಯದಾದ್ಯಂತ ಒಟ್ಟು 750 ಗ್ರಾಮಗಳನ್ನು ಈ ಕಾರ್ಯಕ್ರಮದಡಿ ಗುರುತಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆನ್ಲೈನ್ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸ್ಥಳೀಯ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿಧ್ಯಾನಿಲಯದ ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ. ಎ. ,ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಧಿಕಾರಿ ಹೈದರಾಲಿ ಪಂಚಾಯತು ಉಪಾಧ್ಯಕ್ಷರಾದ ಸುನೀಲ್ ಕೆ., ಪಿಡಿಒ ರವಿ ಬಿ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ, ಸದಸ್ಯರಾದ ಬಾರತಿ ಚೌಟ, ಫೆಲಿಕ್ಸ್ ಡಿಸೋಜಾ, ಪಂಚಾಯತ್ ಸಿಬ್ಬಂದಿ, ಕಾಮಾಜೆ ಕಾಲೇಜಿನ ವಿಧ್ಯಾರ್ಥಿಗಳು ಭಾಗವಹಿಸಿದರು.