ಬಂಟ್ವಾಳ

ಅಮ್ಟಾಡಿ ಮಹಾಶಕ್ತಿಕೇಂದ್ರ ಬಿಜೆಪಿ ಯುವ ಮೋರ್ಚಾದ ಸಭೆ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಬಂಟ್ವಾಳ: ಬಡಕಬೈಲ್ ಬಳಿ ಬಿಜೆಪಿ ಯುವ ಮೋರ್ಚಾದ ಅಮ್ಟಾಡಿ ಮಹಾಶಕ್ತಿಕೇಂದ್ರದ ಬೂತ್ ಸಂಚಾಲಕ, ಸಹಸಂಚಾಲಕರ ಸಭೆ ನಡೆಯಿತು.

ಯುವ ಮೋರ್ಚಾ ಬಂಟ್ವಾಳ ಕ್ಷೇತ್ರಾಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮಹಾಶಕ್ತಿಕೇಂದ್ರ ಅಧ್ಯಕ್ಷ ಸಚಿನ್ ಮಣಿಕಂಠಪುರ ಅಧ್ಯಕ್ಷತೆ ವಹಿಸಿದ್ದರು.  ಬಿಜೆಪಿ ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಸಂಘಟನಾತ್ಮಕ ವಿಚಾರಗಳ ಕುರಿತು ವಿವರಿಸಿದರು. ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪ್ಪಾಡಿ ಕಾರ್ಯಕರ್ತರ ಮುಂದಿರುವ ಸವಾಲುಗಳ ಕುರಿತು ತಿಳಿಸಿದರು. ಯುವಮೋರ್ಚಾ ಉಪಾಧ್ಯಕ್ಷರಾದ ಹೇಮಂತ್ ಮಾಣಿ, ಪ್ರಮೋದ್ ನೂಜಿಪ್ಪಾಡಿ, ತಾಲೂಕ್ ಪಂಚಾಯತ್ ಮಾಜಿ ಸದಸ್ಯ ಯಶವಂತ್ ಪೊಳಲಿ, ಮಂಡಲ ಯುವಮೋರ್ಚಾ ಸದಸ್ಯ ಯತಿನ್ ಶೆಟ್ಟಿ, ಮಹಾಶಕ್ತಿ ಕೇಂದ್ರ ಯುವಮೋರ್ಚಾ ಪ್ರಮುಖರಾದ ಸಿತೇಶ್ ಅಂಚನ್,  ಸಂದೇಶ್ ಕೂರಿಯಾಳ, ಪಂಚಾಯತ್ ಸದಸ್ಯರಾದ ಲೋಕೇಶ್ ಭರಣಿ ಹಾಗೂ ಇತರ ಪಧಾದಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಯುವಮೋರ್ಚಾ ಬಂಟ್ವಾಳ ಪ್ರಧಾನ ಕಾರ್ಯದರ್ಶಿ ಅಶ್ವಥ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯರಾದ ಲೋಕೇಶ್ ಪಲ್ಲಿಪ್ಪಡಿ ಸ್ವಾಗತಿಸಿದರು ಯುವಮೋರ್ಚಾ ಬಂಟ್ವಾಳ ಉಪಾಧ್ಯಕ್ಷರಾದ ಕಾರ್ತಿಕ್ ಬಲ್ಲಾಳ್ ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts