www.bantwalnews.com Report ಬಂಟ್ವಾಳನ್ಯೂಸ್ ವರದಿ
ಬಂಟ್ವಾಳ: ಬಡಕಬೈಲ್ ಬಳಿ ಬಿಜೆಪಿ ಯುವ ಮೋರ್ಚಾದ ಅಮ್ಟಾಡಿ ಮಹಾಶಕ್ತಿಕೇಂದ್ರದ ಬೂತ್ ಸಂಚಾಲಕ, ಸಹಸಂಚಾಲಕರ ಸಭೆ ನಡೆಯಿತು.
ಯುವ ಮೋರ್ಚಾ ಬಂಟ್ವಾಳ ಕ್ಷೇತ್ರಾಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಮಹಾಶಕ್ತಿಕೇಂದ್ರ ಅಧ್ಯಕ್ಷ ಸಚಿನ್ ಮಣಿಕಂಠಪುರ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಸಂಘಟನಾತ್ಮಕ ವಿಚಾರಗಳ ಕುರಿತು ವಿವರಿಸಿದರು. ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪ್ಪಾಡಿ ಕಾರ್ಯಕರ್ತರ ಮುಂದಿರುವ ಸವಾಲುಗಳ ಕುರಿತು ತಿಳಿಸಿದರು. ಯುವಮೋರ್ಚಾ ಉಪಾಧ್ಯಕ್ಷರಾದ ಹೇಮಂತ್ ಮಾಣಿ, ಪ್ರಮೋದ್ ನೂಜಿಪ್ಪಾಡಿ, ತಾಲೂಕ್ ಪಂಚಾಯತ್ ಮಾಜಿ ಸದಸ್ಯ ಯಶವಂತ್ ಪೊಳಲಿ, ಮಂಡಲ ಯುವಮೋರ್ಚಾ ಸದಸ್ಯ ಯತಿನ್ ಶೆಟ್ಟಿ, ಮಹಾಶಕ್ತಿ ಕೇಂದ್ರ ಯುವಮೋರ್ಚಾ ಪ್ರಮುಖರಾದ ಸಿತೇಶ್ ಅಂಚನ್, ಸಂದೇಶ್ ಕೂರಿಯಾಳ, ಪಂಚಾಯತ್ ಸದಸ್ಯರಾದ ಲೋಕೇಶ್ ಭರಣಿ ಹಾಗೂ ಇತರ ಪಧಾದಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ಯುವಮೋರ್ಚಾ ಬಂಟ್ವಾಳ ಪ್ರಧಾನ ಕಾರ್ಯದರ್ಶಿ ಅಶ್ವಥ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯರಾದ ಲೋಕೇಶ್ ಪಲ್ಲಿಪ್ಪಡಿ ಸ್ವಾಗತಿಸಿದರು ಯುವಮೋರ್ಚಾ ಬಂಟ್ವಾಳ ಉಪಾಧ್ಯಕ್ಷರಾದ ಕಾರ್ತಿಕ್ ಬಲ್ಲಾಳ್ ವಂದಿಸಿದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…