ಬಂಟ್ವಾಳ

21ರಿಂದ 25ರವರೆಗೆ ಕಾರಂಬಡೆ ಕ್ಷೇತ್ರದಲ್ಲಿ ಬ್ರಹ್ಮಕಲಶ ಕಾರ್ಯಕ್ರಮ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಬಂಟ್ವಾಳ: ಜನವರಿ 21ರಿಂದ 25ರವರೆಗೆ ಬಂಟ್ವಾಳ ಕಸ್ಬಾ ಗ್ರಾಮದ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ನಡೆಯಲಿದ್ದು, ಜ.24ರಂದು ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಕಾರ್ಯ ನಡೆಯಲಿದೆ ಎಂದು ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಕ್ಷೇತ್ರದ ಪ್ರಮುಖರು ತಿಳಿಸಿದ್ದಾರೆ.

ಈ ಕುರಿತು ಆನುವಂಶೀಯ ಆಡಳಿತ ಮೊಕ್ತೇಸರ ಅರುಣ್ ಕುಮಾರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ, ಬ್ರಹ್ಮಕಲಶೋತ್ಸವ ಆರ್ಥಿಕ ಸಮಿತಿ ಅಧ್ಯಕ್ಷ ಬೇಬಿ ಕುಂದರ್, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ದೇವಪ್ಪ ಕುಲಾಲ್ ಪಂಜಿಕಲ್ಲು ಮಾಹಿತಿ ನೀಡಿದರು.

ಸುಮಾರು 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುವ ಕ್ಷೇತ್ರಕ್ಕೆ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಮಾರ್ಗದರ್ಶನದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಜ.21ರಂದು ಮಧ್ಯಾಹ್ನ 2 ಗಂಟೆಗೆ ಬಿ.ಸಿ.ರೋಡು ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಿಂದ ಕ್ಷೇತ್ರಕ್ಕೆ ಹಸಿರು ಹೊರೆ ಕಾಣಿಕೆ ಮೆರವಣಿಗೆ ನಡೆಯಲಿದ್ದು ಜನವರಿ 24ರಂದು ಬೆಳಿಗ್ಗೆ ಶ್ರೀ ಮಹಾಮ್ಮಾಯಿ ಅಮ್ಮನವರು, ಶ್ರೀ ಗಣಪತಿ ದೇವರು, ಕಾಳಬೈರವ ಮತ್ತು ಪರಿವಾರ ಶಕ್ತಿಗಳ ಪ್ರತಿಷ್ಠೆಯೊಂದಿಗೆ ಬ್ರಹ್ಮಕಲಶಾಭಿಷೇಕ ಸಂಪನ್ನವಾಗಲಿದೆ. ಉತ್ಸವದ  ದಿನಗಳಲ್ಲಿ ಭಜನೆ, ಧಾರ್ಮಿಕ ಸಭೆ, ಅನ್ನಸಂತರ್ಪಣೆ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದವರು ಮಾಹಿತಿ ನೀಡಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts