ಬಂಟ್ವಾಳ

ಬಂಟ್ವಾಳ: ಬಿ.ಮೂಡ ಪದವಿಪೂರ್ವ ಕಾಲೇಜು ವತಿಯಿಂದ ಗುಲಾಬಿ ಅಭಿಯಾನ ಕಾರ್ಯಕ್ರಮ

www.bantwalnews.com Report ಬಂಟ್ವಾಳನ್ಯೂಸ್ ವರದಿ

ಬಂಟ್ವಾಳ : ಶೈಕ್ಷಣಿಕ ಸಂಸ್ಥೆಯ ಆವರಣದಿಂದ ನೂರು ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ವಾತಾವರಣ ನಿರ್ಮಾಣ ಮಾಡಲು ಹಾಗೂ ವಿದ್ಯಾರ್ಥಿಗಳ ಉತ್ತಮ ಆರೋಗ್ಯ ಮತ್ತು ಅವರ ಮುಂದಿನ ಉಜ್ವಲ ಭವಿಷ್ಯದ ದೃಷ್ಟಿಯಿಂದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ” ಗುಲಾಬಿ ಅಭಿಯಾನ ” ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಸ.ಪ. ಪೂ. ಕಾಲೇಜು, ಬಿ.ಮೂಡ. ಇದರ ಎನ್ಎಸ್ಎಸ್ ಘಟಕದ ವತಿಯಿಂದ ನಡೆಸಲಾಯಿತು.

ಕಾಲೇಜಿನ ಎನ್ಎಸ್ಎಸ್ ಘಟಕದ ಸ್ವಯಂಸೇವಕರು, ಯೋಜನಾ ಅಧಿಕಾರಿ ಬಾಲಕೃಷ್ಣ ನಾಯ್ಕ್  ಕೆ. ಇವರ ನೇತೃತ್ವದಲ್ಲಿ ಕಾಲೇಜಿನ ಸುತ್ತಮುತ್ತಲೂ ಇರುವ ಅಂಗಡಿ, ಮಾರಾಟಗಾರರಿಗೆ ಹಾಗೂ ಸಾರ್ವಜನಿಕರಿಗೆ ಜಾಥಾ  ನಡೆಸಿ, ಗುಲಾಬಿ ಹೂ ನೀಡಿ  ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತಿಳಿಯಪಡಿಸಿದರು. ಉಪನ್ಯಾಸಕರಾದ ದಾಮೋದರ ಇ.ಅಬ್ದುಲ್ ರಜಾಕ್, ಅರುಣ್ ಕುಮಾರ್, ಲವೀನ ಶಾಂತಿ ಲೋಬೊ, ಲಕ್ಷ್ಮಿ ಆಚಾರ್ಯ,  ಗ್ಲೋರಿಯಾ ಪಿಂಟೊ,  ಹರ್ಷಿತಾ, ದಿವ್ಯ ಉಪಸ್ಥಿತರಿದ್ದು ಸಹಕರಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ