www.bantwalnews.com Report ಬಂಟ್ವಾಳನ್ಯೂಸ್ ವರದಿ
ಬಂಟ್ವಾಳ: ಶಿರಾಡಿ ಘಾಟಿ ದಕ್ಷಿಣ ಕನ್ನಡ ಜಿಲ್ಲೆಯ ಜೀವನಾಡಿ ಆ ಭಾಗದಲ್ಲಿ ಆರು ತಿಂಗಳು ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ಕಾಮಗಾರಿ ನಡೆಸಿದರೆ ಜನಜೀವನಕ್ಕೆ ತೊಂದರೆ ಆಗುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸೋಮವಾರ ಬಿ.ಸಿ.ರೋಡ್ ನಲ್ಲಿ ಹೊಸದಾಗಿ ರಚನೆಯಾಗುತ್ತಿರುವ ಸೇತುವೆ ಕಾಮಗಾರಿ, ಕಲ್ಲಡ್ಕದಲ್ಲಿ ನಡೆಯುತ್ತಿರುವ ಫ್ಲೈಓವರ್ ಕಾಮಗಾರಿ ಮತ್ತು ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮೀಪ ಸರ್ಕಲ್ ನಿರ್ಮಾಣದ ಜಾಗಗಳನ್ನು ಸಚಿವ ಎಸ್.ಅಂಗಾರ, ಶಾಸಕ ರಾಜೇಶ್ ನಾಯ್ಕ್ ಅವರೊಂದಿಗೆ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಸಮಸ್ಯೆಗಳು ಉಂಟಾಗದಂತೆ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ . ಒಂದು ಬದಿಯಿಂದ ವಾಹನಗಳನ್ನು ಬಿಟ್ಟು ಮತ್ತೊಂದು ಕಡೆಯಿಂದ ಕಾಮಗಾರಿ ನಿರ್ವಹಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಿ, ಕ್ರಮ ಕೈಗೊಳ್ಳಬೇಕು. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ವೀಕ್ಷಣೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ನಳಿನ್ ತಿಳಿಸಿದರು.
ಬಿ.ಸಿ.ರೋಡ್ ಅಡ್ಡಹೊಳೆ ಚತುಷ್ಪಥ ಕಾಮಗಾರಿಯಲ್ಲಿ ಬಿ.ಸಿ.ರೋಡಿನಿಂದ ಗುಂಡ್ಯದವರೆಗಿನ ಅಭಿವೃದ್ಧಿ ಭರದಿಂದ ಸಾಗುತ್ತಿದ್ದು, ಕಲ್ಲಡ್ಕ ಷಟ್ಪಥ ಫ್ಲೈಓವರ್ ಸಹಿತ ಎರಡು ಸೇತುವೆಗಳಿರುವ ಈ ಭಾಗದ ಕೆಲಸ 2023ರಲ್ಲಿ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದರು. ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಪ್ರಮುಖರಾದ ವಜ್ರನಾಥ ಕಲ್ಲಡ್ಕ, ಮೋನಪ್ಪ ದೇವಸ್ಯ, ಯಶೋಧರ ಕರ್ಬೆಟ್ಟು, ದಿನೇಶ್ ಅಮ್ಟೂರು, ಕಮಲಾಕ್ಷಿ ಕೆ. ಪೂಜಾರಿ, ಕೇಶವ ದೈಪಲ, ಅಭಿಷೇಕ್ ಶೆಟ್ಟಿ, ಪುಷ್ಪರಾಜ್ ಚೌಟ, ಚೆನ್ನಪ್ಪ ಕೋಟ್ಯಾನ್, ಸುದರ್ಶನ ಬಜ, ಯತಿನ್ ಕುಮಾರ್, ಮಾಧವ ಮಾವೆ, ಕೆಎನ್ಆರ್ ನ ಅಧಿಕಾರಿಗಳು, ಭೂಸ್ವಾಧೀನಾಧಿಕಾರಿಗಳು ಉಪಸ್ಥಿತರಿದ್ದರು.
Be the first to comment on "ಸಂಸದ ನಳಿನ್, ಸಚಿವ ಅಂಗಾರ, ಶಾಸಕ ರಾಜೇಶ್ ನಾಯ್ಕ್ ಅವರಿಂದ ಬಿ.ಸಿ.ರೋಡ್ ಸೇತುವೆ, ಕಲ್ಲಡ್ಕ ಫ್ಲೈಓವರ್ ಸಹಿತ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪರಿಶೀಲನೆ"