ಬಂಟ್ವಾಳ: ಬೋಳುಗುಡ್ಡೆಯಲ್ಲಿ ಜೀವಜಲವನ್ನು ಏಕಾಂಗಿಯಾಗಿ ತರಿಸಿದ ಭಗೀರಥ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಮೈ ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಗೌರವ ಪ್ರಾಪ್ತವಾಗಿದೆ.
ಬಂಟ್ವಾಳ ತಾಲೂಕಿನ ಅಡ್ಯನಡ್ಕ ಸಮೀಪದ ಅಮೈ ನಿವಾಸಿ 77ರ ಹರೆಯದ ಮಹಾಲಿಂಗ ನಾಯ್ಕ ಕರಾವಳಿಯ ಪ್ರಮುಖ ಕೃಷಿ ಸಾಧಕ. ಕೃಷಿಗೆ ನೀರು ಹಾಯಿಸಲು ಪಂಪ್ ಸೆಟ್ ಸೌಲಭ್ಯಗಳೇ ಕಷ್ಟ ಎಂಬ ಕಾಲದಲ್ಲಿ ಸುರಂಗ ನೀರಿನ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟು, ಇದೇ ವ್ಯವಸ್ಥೆಯಲ್ಲಿ ವಿದ್ಯುತ್ ರಹಿತವಾಗಿ ಗ್ರಾವಿಟಿ ನೆರವಿನಲ್ಲಿ ಕೃಷಿಗೆ ತುಂತುರು ನೀರಾವರಿ, ಸ್ಪ್ರಿಂಕ್ಲರ್ ನೀರಾವರಿ ವ್ಯವಸ್ಥೆ ಕಲ್ಪಿಸಿರುವ ನಾಯ್ಕ ಅವರು ಏಕಾಂಗಿಯಾಗಿ ಏಳು ಸುರಂಗಗಳನ್ನು ಕೊರೆದವರು.ಇಳಿಜಾರು ಬೋಳು ಗುಡ್ಡೆಯಲ್ಲಿ ಕೃಷಿ ಮಾಡುವ ಸಾಹಸಕ್ಕೆ ಹೊರಟ ಮಹಾಲಿಂಗ ನಾಯ್ಕ ಅವರು ಸುರಂಗ ತೋಡಿದ ಯಶೋಗಾಥೆಗೆ ಈ ಪ್ರಶಸ್ತಿ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪದ್ಮಶ್ರೀ ಪ್ರಶಸ್ತಿಗೆ ವಿಟ್ಲ ಸಮೀಪದ ‘ಭಗೀರಥ’ ಅಮೈ ಮಹಾಲಿಂಗ ನಾಯ್ಕ ಆಯ್ಕೆ"
Be the first to comment on "ಪದ್ಮಶ್ರೀ ಪ್ರಶಸ್ತಿಗೆ ವಿಟ್ಲ ಸಮೀಪದ ‘ಭಗೀರಥ’ ಅಮೈ ಮಹಾಲಿಂಗ ನಾಯ್ಕ ಆಯ್ಕೆ"