ಬಂಟ್ವಾಳ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಬಂಟ್ವಾಳ ತಾಲೂಕಿನಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ದಾಸ್ತಾನು ಮಳಿಗೆಯಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲಾಗಿದ್ದು, ರೈತರು ಈ ಖರೀದಿ ಕೇಂದ್ರದಲ್ಲಿ ಕನಿಷ್ಠ ಬೆಂಬಲ ಬೆಲೆ- ಸಾಮಾನ್ಯ ಭತ್ತ ಕ್ವಿಂಟಾಲ್‌ಗೆ 1940 ರೂ. ಹಾಗೂ ಎ ಗ್ರೇಡ್ ಭತ್ತಕ್ಕೆ 1960 ರೂ.ಗೆ ಭತ್ತ ಮಾರಾಟ ಮಾಡಬಹುದಾಗಿದೆ. ಆಸಕ್ತರು ತಾಲೂಕು ಖರೀದಿ ಕೇಂದ್ರದ ನೋಡಲ್ ಅಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಬಂಟ್ವಾಳ ತಾಲೂಕು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)