www.bantwalnews.com Report ಬಂಟ್ವಾಳನ್ಯೂಸ್ ವರದಿ
ಗಣರಾಜ್ಯೋತ್ಸವವನ್ನು ಬಂಟ್ವಾಳ ತಾಲೂಕು ಆಡಳಿತ ಸೌಧ ಸೇರಿದಂತೆ ಎಲ್ಲೆಡೆ ಆಚರಿಸಲಾಯಿತು. ಸರ್ಕಾರಿ ಕಚೇರಿ, ಕೋರ್ಟು, ಶಾಲಾ ಕಾಲೇಜುಗಳಲ್ಲಿ ರಾಷ್ಟ್ರಧ್ವಜಕ್ಕೆ ವಂದನೆ ಸಲ್ಲಿಸುವ ಹಾಗೂ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸುವ ಮೂಲಕ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ಕಾಲೇಜುಗಳು, ಕಚೇರಿಗಳಲ್ಲಿ ಆಯಾ ಮುಖ್ಯಸ್ಥರು ಪಾಲ್ಗೊಂಡರೆ, ತಾಲೂಕು ಆಡಳಿತ ಸೌಧದಲ್ಲಿ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು. ವಿವರ ಇಲ್ಲಿದೆ.
ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಗಣರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ತಹಸೀಲ್ದಾರ್ ರಶ್ಮಿ ಎಸ್.ಆರ್. ಧ್ವಜಾರೋಹಣ ಕಾರ್ಯ ನೆರವೇರಿಸಿ, ಬಂಟ್ವಾಳ ತಾಲೂಕಿನ ರೈತರಿಗೆ ಪದ್ಮಶ್ರೀ ಪುರಸ್ಕಾರ ದೊರಕಿರುವುದು ಹೆಮ್ಮೆಯ ವಿಚಾರ ಎಂದರು. ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ, ಗಣರಾಜ್ಯೋತ್ಸವದ ಸಂದರ್ಭ ದೇಶದ ಇತಿಹಾಸ ಮತ್ತು ವರ್ತಮಾನವನ್ನು ಅರಿಯುವ ಕಾರ್ಯ ನಡೆಸಬೇಕು ಎಂದರು. ಶಿಕ್ಷಕ ವಿಠಲ ನಾಯಕ್ ಮಾತನಾಡಿ, ದೇಶ ಕಾಯುವ ಸೈನಿಕ ಮತ್ತು ಅನ್ನ ಕೊಡುವ ರೈತ ಕೋವಿಡ್ ಕಾಲದಲ್ಲೂ ಸಕ್ರಿಯವಾಗಿರುವುದನ್ನು ಮರೆಯಬಾರದು ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಡಿವೈಎಸ್ಪಿ ಪ್ರತಾಪ್ ಥೋರಾಟ್, ಕೇಂದ್ರ ಸ್ಥಾನಿಯ ಶಿರಸ್ತೇದಾರ್ ನರೇಂದ್ರ ನಾಥ್ ಮಿತ್ತೂರು, ಉಪತಹಸೀಲ್ದಾರ್ ಗಳಾದ ರಾಜೇಶ್ ನಾಯ್ಕ್, ನವೀನ್ ಬೆಂಜನಪದವು, ದಿವಾಕರ ಮುಗುಳಿಯ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್, ಸಬ್ ರಿಜಿಸ್ಟ್ರಾರ್ ಕವಿತಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಬಿಂದಿಯಾ ನಾಯಕ್, ಕಂದಾಯ ನಿರೀಕ್ಷಕರಾದ ಧರ್ಮ ಸಾಮ್ರಾಜ್ಯ, ಮಂಜುನಾಥ್ ಕೆ ಎಚ್, ಕುಮಾರ್ ಟಿ.ಸಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಉಪಸ್ಥಿತರಿದ್ದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ.ಜ್ಞಾನೇಶ್ ವಂದಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು. ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.