ಹುಮನಾಬಾದ್ ತಹಸೀಲ್ದಾರ್ ಗೆ ಹಲ್ಲೆ: ಕ್ರಮ ಕೈಗೊಳ್ಳಲು ಬಂಟ್ವಾಳದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಕೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ 9448548127

ಬಂಟ್ವಾಳ: ಬೀದರ್ ಜಿಲ್ಲೆಯ ಹುಮನಾಬಾದ್ ತಹಸೀಲ್ದಾರ್ ಡಾ. ಪ್ರದೀಪ್ ಕುಮಾರ್ ಹಿರೇಮಠ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ದಾಳಿಕೋರರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿ ಮಂಗಳವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ಮತ್ತು ತಹಸೀಲ್ದಾರ್ ಅವರ ಮೂಲಕ ಮನವಿ ಸಲ್ಲಿಕೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭ ಮನವಿ ಸ್ವೀಕರಿಸಿ ಮಾತನಾಡಿದ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್., ಕರ್ತವ್ಯನಿರತ ಸರ್ಕಾರಿ ನೌಕರರ ಹಿತ ಕಾಯುವ ಹಿನ್ನೆಲೆಯಲ್ಲಿ ನೀಡಲಾದ ಮನವಿಯನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.

ಜಾಹೀರಾತು

ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು ಮಾತನಾಡಿ, ಡಿವೈಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆದು ವಿಶೇಷ ನ್ಯಾಯಾಲಯ ಮೂಲಕ ವಿಚಾರಣೆಯಾಗಬೇಕು ಎಂದು ಒತ್ತಾಯಿಸಿದರು. ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ತು ಸದಸ್ಯ ಜನಾರ್ದನ, ತಾಲೂಕು ಖಜಾಂಚಿ ಬಸಯ್ಯ, ಉಪಾಧ್ಯಕ್ಷ ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ನವೀನ್ ಪಿ.ಎಸ್.ತಾಲೂಕು ಅಧ್ಯಕ್ಷ ಜಯರಾಮ್, ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ನಾಯಕ್ ರಾಯಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಜೋಯೆಲ್, ಕಂದಾಯ ಇಲಾಖಾ ನೌಕರರ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ್, ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಅನಿಲ್ ಕೆ,  ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಜತ್ತಪ್ಪ ಗೌಡ ಮತ್ತು ಇಂದುಶೇಖರ, ಶಿಕ್ಷಕರ ಸಂಘದ ಕಾರ್ಯದರ್ಶಿ ಯತೀಶ್, ಪ್ರಮುಖರಾದ ಸಿನಿಲ್, ಪುಟ್ಟರಂಗನಾಥ್, ಚಿನ್ನಪ್ಪ ಜಾಲ್ಸೂರು, ನವೀನ್ ಬೆಂಜನಪದವು, ನರೇಂದ್ರನಾಥ್ ಮಿತ್ತೂರು ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹುಮನಾಬಾದ್ ತಹಸೀಲ್ದಾರ್ ಗೆ ಹಲ್ಲೆ: ಕ್ರಮ ಕೈಗೊಳ್ಳಲು ಬಂಟ್ವಾಳದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*