www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ 9448548127
ಬಂಟ್ವಾಳ: ಬೀದರ್ ಜಿಲ್ಲೆಯ ಹುಮನಾಬಾದ್ ತಹಸೀಲ್ದಾರ್ ಡಾ. ಪ್ರದೀಪ್ ಕುಮಾರ್ ಹಿರೇಮಠ್ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ದಾಳಿಕೋರರ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿ ಮಂಗಳವಾರ ರಾಜ್ಯ ಸರ್ಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿ.ಸಿ.ರೋಡಿನ ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ಮತ್ತು ತಹಸೀಲ್ದಾರ್ ಅವರ ಮೂಲಕ ಮನವಿ ಸಲ್ಲಿಕೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಮನವಿ ಸ್ವೀಕರಿಸಿ ಮಾತನಾಡಿದ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್., ಕರ್ತವ್ಯನಿರತ ಸರ್ಕಾರಿ ನೌಕರರ ಹಿತ ಕಾಯುವ ಹಿನ್ನೆಲೆಯಲ್ಲಿ ನೀಡಲಾದ ಮನವಿಯನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.
ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು ಮಾತನಾಡಿ, ಡಿವೈಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ತನಿಖೆ ನಡೆದು ವಿಶೇಷ ನ್ಯಾಯಾಲಯ ಮೂಲಕ ವಿಚಾರಣೆಯಾಗಬೇಕು ಎಂದು ಒತ್ತಾಯಿಸಿದರು. ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ತು ಸದಸ್ಯ ಜನಾರ್ದನ, ತಾಲೂಕು ಖಜಾಂಚಿ ಬಸಯ್ಯ, ಉಪಾಧ್ಯಕ್ಷ ಮಂಜುನಾಥ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ ನವೀನ್ ಪಿ.ಎಸ್.ತಾಲೂಕು ಅಧ್ಯಕ್ಷ ಜಯರಾಮ್, ಅಧ್ಯಾಪಕರ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ನಾಯಕ್ ರಾಯಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಜೋಯೆಲ್, ಕಂದಾಯ ಇಲಾಖಾ ನೌಕರರ ಸಂಘದ ತಾಲೂಕು ಅಧ್ಯಕ್ಷ ಪ್ರಕಾಶ್, ಗ್ರಾಮಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಅನಿಲ್ ಕೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಜತ್ತಪ್ಪ ಗೌಡ ಮತ್ತು ಇಂದುಶೇಖರ, ಶಿಕ್ಷಕರ ಸಂಘದ ಕಾರ್ಯದರ್ಶಿ ಯತೀಶ್, ಪ್ರಮುಖರಾದ ಸಿನಿಲ್, ಪುಟ್ಟರಂಗನಾಥ್, ಚಿನ್ನಪ್ಪ ಜಾಲ್ಸೂರು, ನವೀನ್ ಬೆಂಜನಪದವು, ನರೇಂದ್ರನಾಥ್ ಮಿತ್ತೂರು ಮತ್ತಿತರರು ಉಪಸ್ಥಿತರಿದ್ದರು.