ಕಲ್ಲಡ್ಕ

ಗುಣಮಟ್ಟದ ಶಿಕ್ಷಣ ನೀಡುವ ಶಾಲೆಗಳ ಅಭಿವೃದ್ಧಿಗೆ ಬದ್ಧ: ಪ್ರತಾಪ್ ಸಿಂಹ ನಾಯಕ್

www.bantwalnews.com Report ಬಂಟ್ವಾಳನ್ಯೂಸ್ ವರದಿ

ಬಂಟ್ವಾಳ:  ಗುಣಮಟ್ಟದ ಶಿಕ್ಷಣ ನೀಡುವ ಶಾಲೆಗಳ ಅಭಿವೃದ್ಧಿ ನನ್ನ ಮೊದಲ ಆದ್ಯತೆ ಎಂದು ವಿಧಾನ‌ಪರಿಷತ್ ಸದಸ್ಯ ಪ್ರತಾಪ ಸಿಂಹ‌ ನಾಯಕ್ ಹೇಳಿದ್ದಾರೆ.

ಕಲ್ಲಡ್ಕ ಸರ್ಕಾರಿ  ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ‌ ಅವರು, ಶಾಲೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿ, ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ತನ್ನ ಅನುದಾನದ .ಶೇ. 60 ರಷ್ಟನ್ನು ಶಾಲೆಗಳಿಗೆ ನೀಡಿದ್ದು, ಕಲ್ಲಡ್ಕ  ಶಾಲೆಯ ಅಭಿವೃದ್ಧಿಗೆ ಶಕ್ತಿ ಮೀರಿ ನೆರವು ನೀಡುವುದಾಗಿ ತಿಳಿಸಿದರು. ಮಾಜಿ ‌ಶಾಸಕ ಎ. ರುಕ್ಮಯ ಪೂಜಾರಿ ಮಾತನಾಡಿ, ಕಲ್ಲಡ್ಕ ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ಹಲವು ಯೋಜನೆಗಳನ್ನು ರೂಪಿಸಿದ್ದು, ಇದರ ಸಹಕಾರಕ್ಕೆ ಜನಪ್ರತಿನಿಧಿಗಳ  ಸಹಕಾರ ಅಗತ್ಯ ಎಂದರು. ಇದೇ ವೇಳೆ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ‌ ನಾಯಕ್ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಹಿರಿಯರ ಪ್ರಕೋಷ್ಠದ  ಜಿಲ್ಲಾ ನಾಯಕರು ವಿಧಾನಪರಿಷತ್ ಸದಸ್ಯರ ಜೊತೆಗಿದ್ದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಧುಸೂದನ್ ಐತಾಳ್,  ಮಾಜಿ ಶಾಸಕರಾದ  ಪದ್ಮನಾಭ ಕೊಟ್ಟಾರಿ, ಪ್ರಮುಖರಾದ ಮೋಹನ ದಾಸ್ ಕೊಟ್ಟಾರಿ, ನಾಗೇಶ್ ಕಲ್ಲಡ್ಕ, ಅಬ್ದುಲ್ ಸಲೀಂ , ಅಬೂಬಕರ್ ಮುರಬೈಲು ಎಸ್ ಡಿಎಂ ಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಅಬೂಬಕರ್ ಅಶ್ರಫ್ ಸ್ವಾಗತಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯತೀನ್‌ ಕಲ್ಲಡ್ಕ ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.