ಬಂಟ್ವಾಳ

ಪಂಜಿಕಲ್ಲು ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ, ಕಲಶಾಭಿಷೇಕ, ಸೋಮವಾರ ಡಿ.ಕೆ.ಶಿವಕುಮಾರ್ ಭೇಟಿ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಪಂಜಿಕಲ್ಲು ಬಸದಿಯಲ್ಲಿ ನಡೆಯುತ್ತಿರುವ ಪಂಚಕಲ್ಯಾಣ ಹಿನ್ನೆಲೆಯಲ್ಲಿ ಭಾನುವಾರ ಭಗವಾನ್ ಶ್ರೀ ಆದಿನಾಥ ಸ್ವಾಮಿಗೆ 504 ಕಲಶಾಭಿಷೇಕ ಮಹೋತ್ಸವ ಸಹಿತ ವಿವಿಧ ಕಾರ್ಯಕ್ರಮಗಳು ನೆರವೇರಿದವು. ಬೆಳಗ್ಗೆ ಸಾಮೂಹಿಕ ವೃತೋಪದೇಶ, ಗಣಧರವಲಯ ಆರಾಧನಾ ವಿಧಾನ, ಯಾಗಮಂಡಲಾರಾಧನೆ, ರಾಜ್ಯಭಾರ, ರಾಜವೈಭವ, ಪರಿನಿಷ್ಕ್ರಮಣ ಕಲ್ಯಾಣ, ದೀಕ್ಷಾ ವಿಧಿ ನೆರವೇರಿತು. ಪಂಜಿಕಲ್ಲು ಬಸದಿಯಲ್ಲಿ ನಡೆಯುತ್ತಿರುವ ಪಂಚಕಲ್ಯಾಣ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೋಮವಾರ ಪಂಜಿಕಲ್ಲಿಗೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಜೀರ್ಣೋದ್ಧಾರ ಮತ್ತು ಪಂಚಕಲ್ಯಾಣ ಮಹೋತ್ಸವ ಸಮಿತಿ ಅಧ್ಯಕ್ಷ ಸುದರ್ಶನ ಜೈನ್ ತಿಳಿಸಿದ್ದಾರೆ.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ