www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಬಂಟ್ವಾಳ: ಸಾಂಪ್ರದಾಯಿಕ ಶೈಲಿಯ ಭಾಗವತಿಕೆ ಮೂಲಕ ಬಲಿಪ ಪರಂಪರೆಯನ್ನು ಮುನ್ನಡೆಸುತ್ತಿರುವ ಬಲಿಪ ಪ್ರಸಾದ ಭಟ್ ಅವರಿಗೆ ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಬೊಂಡಾಲದಲ್ಲಿ ನಡೆಯುವ ಕಟೀಲು ಮೇಳದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಫೆ.18ರಂದು ಬೊಂಡಾಲ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಬೊಂಡಾಲ ಸಚ್ಚಿದಾನಂದ ಶೆಟ್ಟಿ ಹೇಳಿದ್ದಾರೆ.
17ರಂದು ಕೃಷ್ಣ ಕೃಷ್ಣ ಶ್ರೀಕೃಷ್ಣ ಮತ್ತು 18ರಂದು ಶ್ರೀ ದೇವಿ ಮಹಾತ್ಮೆ ಎಂಬ ಕಥಾಭಾಗವನ್ನು ಕಟೀಲು ಮೇಳದವರು ರಾತ್ರಿ 9.30ಕ್ಕೆ ಆಡಿ ತೋರಿಸಲಿದ್ದು, ಈ ಸಂದರ್ಭ 18ರಂದು ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಸಂಸ್ಮರಣೆ ಹಾಗೂ ಬೊಂಡಾಲ 2022 ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷರಾಗಿರುವ ಸಚ್ಚಿದಾನಂದ ಶೆಟ್ಟಿ ಬೊಂಡಾಲ ಹೇಳಿದರು. ಗೌರವ ಅತಿಥಿಗಳಾಗಿ ಕಟೀಲು ಕ್ಷೇತ್ರದ ಅನಂತಪದ್ಮನಾಭ ಆಸ್ರಣ್ಣ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ ಭಾಗವಹಿಸುವರು.
Be the first to comment on "ಫೆ.18ರಂದು ಬಲಿಪ ಪ್ರಸಾದ್ ಭಟ್ ಅವರಿಗೆ ಬೊಂಡಾಲ ಪ್ರಶಸ್ತಿ ಪ್ರದಾನ"