ಇಂದಿನಿಂದ ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆ. ಆನಂದೋತ್ಸವ ಗುರುವಂದನೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ವೇದ ಮೂರ್ತಿ ಚಂದ್ರಶೇಖರ ಉಪಾಧ್ಯಾಯರ ಪೌರೋಹಿತ್ಯದಲ್ಲಿ ಶ್ರೀ ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆ  ತುಳು ಬಾಷೆ-ಸಂಸ್ಕೃತಿದ ಜಾಗೃತಿಗಾಗಿ ‘ಇಪ್ಪತ್ತೆರಡನೇ ಐಸಿರೊ’ ತುಳು ಸಾಹಿತ್ಯ ಸಮ್ಮೇಳನ ಹಾಗೂ ಶ್ರೀಗಳ ಷಷ್ಠ್ಯಬ್ದ ಸಂಭ್ರಮ – ಜ್ಞಾನವಾಹಿನಿ ಸಮಾರೋಪ ಆನಂದೋತ್ಸವ – ಗುರುವಂದನೆ ಕಾರ್ಯಕ್ರಮ ಫೆ.10ಹಾಗೂ ಫೆ.11ರಂದು ನಡೆಯಲಿದೆ.

ಫೆ.೧೦ರಂದು ಬೆಳಗ್ಗೆ ನಡೆಯುವ ತುಳು ಸಾಹಿತ್ಯ‌ಸಮ್ಮೇಳನ ವನ್ನು‌ ಶ್ರೀ ಗುರುದೇವಾನಂದ ಸ್ವಾಮೀಜಿಯವರು ದೀಪಬೆಳಗಿಸಿ ಉದ್ಘಾಟಿಸಲಿದ್ದಾರೆ. ಸಾಧ್ವಿ ಶ್ರೀ ಮಾತಾನಂದಮಯೀರವರು ದಿವ್ಯ ಉಪಸ್ಥಿತಿ ವಹಿಸಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಕ್ಯಾಂಪ್ಕೋ ನಿರ್ದೇಶಕ ಡಾ. ಜಯಪ್ರಕಾಶನಾರಾಯಣ ತೊಟ್ಟೆತ್ತೋಡಿ, ಒಡಿಯೂರು ಶ್ರೀ ಷಷ್ಠ್ಯಬ್ದ ಸಂಭ್ರಮ ಮುಂಬೈ ಪ್ರಕಾಶ್  ಕೆ‌‌. ಶೆಟ್ಟಿಯವರು ಪೇಟೆಮನೆ, ಥಾನೆಯ ಉದ್ಯಮಿ ಮೋಹನ ಹೆಗ್ಡೆ ಬೆಜ್ಜ ಮೊದಲಾದವರು ಆಗಮಿಸಲಿದ್ದಾರೆ. ಬಳಿಕ ನಡೆಯುವ ತುಳು ತುಲಿಪು ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ ಪ್ರಾಂಶುಪಾಲ ಪ್ರೋ. ಚಂದ್ರಪ್ರಭಾ ಆರ್ ಹೆಗ್ಡೆ ಶಿರ್ವರವರು‌ವಹಿಸಲಿದ್ದಾರೆ. ‘ಶಿಕ್ಷಣೊಡು ತುಳು ಬಾಷೆ’ ವಿಚಾರವಾಗಿ ತುಳು ಸ್ನಾತ್ತಕೋತ್ತರ ಅಧ್ಯಯನ ವಿಭಾದ ಸಂಯೋಜಕರಾದ ಡಾ. ಮಾಧವ ಎಂ. ಕೆ.  ಹಾಗೂ ‘ ಬಹುಸಂಸಕೃತಿಡ್ ತುಳು ಸಂಸ್ಕೃತಿದ ಒರಿಪು’ ವಿಚಾರವಾಗಿ ‘ ಮಂಗಳೂರು ಶಾರದಾ ವಿದ್ಯಾಲಯ ಉಪಪ್ರಾಂಶುಪಾಲರಾದ ದಯಾನಂದ ಕಟೀಲು ರವರು ಮಾತನಾಡಲಿದ್ದಾರೆ.

ಜಾಹೀರಾತು

ಸಾಯಂಕಾಲ ಶ್ರೀ ಗುರುದೇವಾನಂದ‌ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ‘ಒಡಿಯೂರು ಶ್ರೀ’ ಪ್ರಶಸ್ತಿ ಪ್ರದಾನ, ಒಡಿಯೂರು ಶ್ರೀ ಷಷ್ಠ್ಯಬ್ದ ತಮ್ಮನ – ಬಲ್ಮನ ನಡೆಯಲಿದೆ. ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷರಾದ ಹರೀಶ್‌ ಶೆಟ್ಟಿ ಐಕಳ, ಉದ್ಯಮಿಗಳಾದ ಪಿ. ಸುಬ್ರಾಯ ಪೈ ವಿಟ್ಲ, ಸುರೇಶ್‌‌ ಶೆಟ್ಟಿ ಗುರ್ಮೆ, ಉಡುಪಿ. ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯ ವ್ಯವಸ್ಥಾಪಕರಾದ ಜಯಕರ ಶೆಟ್ಟಿ ಇಂದ್ರಾಳಿ, ಒಡಿಯೂರು ಶ್ರೀ ಷಷ್ಠ್ಯಬ್ದ ಸಂಭ್ರಮ ಸಮಿತಿ ಮುಂಬೈ ಇದರ ಅಧ್ಯಕ್ಷರಾದ ವಾಮಯ್ಯ ಬಿ. ಶೆಟ್ಟಿ  ಮೊದಲಾದವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಫೆ.೧೧ರಂದು ಶ್ರೀ ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆ ನಡೆಯಲಿದೆ. ಆ ಪ್ರಯುಕ್ತ ಬೆಳಗ್ಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭಗೊಳ್ಳಲಿದೆ. ಬಳಿಕ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಷಷ್ಠ್ಯಬ್ದ ಸಂಭ್ರಮ- ಜ್ಞಾನವಾಹಿನಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಆನಂದೋತ್ಸವ- ಗುರುವಂದನೆ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮ ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಮೂಡಬಿದ್ರೆರವರು ವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮ: ಫೆ.10ರಂದು ಸಾಯಂಕಾಲದಿಂದ ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ. ರಾತ್ರಿ ಎಂಟು ಗಂಟೆಯಿಂದ ಪಾವಂಜೆ  ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ‌ಯವರಿಂದ ‘ಕೃಷ್ಣಲೀಲೆ – ಕಂಸವಧೆ’ ಪೌರಾಣಿಕ ಯಕ್ಷಗಾನ ಬಯಲಾಟ ನಡೆಯಲಿದೆ.

ಜಾಹೀರಾತು

ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ವಿ. ಸುನಿಲ್ ಕುಮಾರ್, ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ, ಮುಂಬೈ ಹೇರಂಬನ ಇಂಡಸ್ಡ್ರೀಸ್ ನ ಆಡಳಿತ ನಿರ್ದೇಶಕರಾದ ಸದಾಶಿವ ಶೆಟ್ಟಿ ಕನ್ಯಾನ,‌  ಮಂಗಳೂರು ಚಾರ್ಟೆಡ್ ಅಕೌಂಟೆ ಶಾಂತರಾಮ ಶೆಟ್ಟಿ, ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಪುತ್ತೂರು ಶಾಸಕರಾದ ಸಂಜೀವ ಮಠಂದೂರು, ಮೂಡಬಿದ್ರೆ ಶಾಸಕರಾದ ಉಮಾನಾಥ ಎ ಕೋಟ್ಯಾನ್, ಮಂಗಳೂರು  ಧಕ್ಷಿಣದ ಶಾಸಕ ವೇದವ್ಯಾಸ ಕಾಮತ್, ಸುರತ್ಕಲ್ ಶಾಸಕ ವೈ ಭರತ್‌ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ  ಮೇಯರ್ ಪ್ರೇಮಾನಂದ ಶೆಟ್ಟಿ, ಬ್ಯಾಂಕ್ ಆಪ್ ಬರೋಡದ ಮಂಗಳೂರು ಶಾಖಾ ಜನರಲ್ ವ್ಯಾನೇಜರ್ ಗಾಯತ್ರಿ ರವಿಚಂದ್ರನ್ ರವರು ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧೨ರಿಂದ ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಸಾಯಂಕಾಲ ಶ್ರೀ ದತ್ತಾಂಜನೇಯ ದೇವರ ವೈಭವದ ರಥಯಾತ್ರೆ ನಡೆಯಲಿದೆ. ಶ್ರೀ ಸಂಸ್ಥಾನದಿಂದ ಗ್ರಾಮ ದೈವಸ್ಥಾನ(ಮಿತ್ತನಡ್ಕ)ಕ್ಕೆ ಹೋಗಿ, ಕನ್ಯಾನ ಪೇಟೆ ಸವಾರಿ, ನಂತರ ಸದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆಯ ಬಳಿಕ ಶ್ರೀ ಸಂಸ್ಥಾನಕ್ಕೆ ಹಿಂತಿರುಗಲಿದೆ.

ವಿಶೇಷ ಆಕರ್ಷಣೆ: ಕನ್ಯಾನ ಸದ್ಗುರು ನಿತ್ಯಾನಂದ ಮಂದಿರದ ಬಳಿ ಪಾವಂಜೆ ಮೇಳದವರಿಂದ ‘ಶ್ರೀ ದೇವಿ ಮಹಾತ್ಮ್ಯೆ’ ಯಕ್ಷಗಾನ ಬಯಲಾಟ ನಡೆಯಲಿದೆ.  ಮಿತ್ತನಡ್ಕ ಶ್ರೀ ಮಲರಾಯಿ ದೈವಸ್ಥಾನದ ಬಳಿ ಸಾಂಸ್ಕೃತಿಕ ವೈವಿಧ್ಯ ನಡೆಯಲಿದೆ‌. ಕಮ್ಮಾಜೆಯಲ್ಲಿ ಅಮ್ಮಾಗ್ರೂಪ್ಸ್‌ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಇಂದಿನಿಂದ ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆ. ಆನಂದೋತ್ಸವ ಗುರುವಂದನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*