www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಬಂಟ್ವಾಳ: ಧರ್ಮರಕ್ಷಣೆಗೆ ನಾವು ಬದ್ಧರಾದರಷ್ಟೇ ದೇಶದ ಉಳಿವು, ಜಗತ್ತು ನಿಂತಿರುವುದೇ ಧರ್ಮದ ಆಧಾರದಲ್ಲಿ ಎಂದು ಹೊಸನಗರ ಶ್ರೀ ರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಹೇಳಿದರು.
ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ನಾವೆಲ್ಲರೂ ಧರ್ಮಕ್ಕೆ ಬದ್ಧರಾಗೋಣ ಎಂದು ಹೇಳಿದ ಸ್ವಾಮೀಜಿ, ಧರ್ಮ ರಕ್ಷಣೆ ಮಾಡಬೇಕು. ಧರ್ಮ ಉಳಿದರೆ ದೇಶ, ಉಳಿದೀತು. ದೇವಸ್ಥಾನ ಸಮಾಜಕ್ಕೆ ಪ್ರೇರಣೆ ನೀಡುತ್ತದೆ. ಬ್ರಹ್ಮಕಲಶೋತ್ಸವ ನಮ್ಮ ಶ್ರದ್ಧೆಯನ್ನು ಹೆಚ್ಚಿಸುತ್ತದೆ ಎಂದರು
ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಶುಭ ಹಾರೈಸಿ ಆಶೀರ್ವಚನ ನೀಡಿದರು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿ, ದೇವಸ್ಥಾನವನ್ನು ಉಳಿಸಬೇಕಿದ್ದರೆ, ಹಿಂದು ಸಮಾಜ ಉಳಿಯಬೇಕು, ಹಿಂದುಗಳು ನಾವೆಲ್ಲ ಒಂದು ಎಂದರಷ್ಟೇ ಇದು ಸಾಧ್ಯ ಎಂದರು.
ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್ ವಹಿಸಿದ್ದರು. ಅತಿಥಿಗಳಾಗಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ, ಸಜಿಪಮಾಗಣೆ ತಂತ್ರಿ ಸುಬ್ರಹ್ಮಣ್ಯ ಭಟ್ ಮಂಜಿನಡ್ಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್, ಬಂಟರ ಸಂಘ ಮುಂಬೈ ಅಧ್ಯಕ್ಷ ಚಂದ್ರಹಾಸ ಕೆ.ಶೆಟ್ಟಿ, ಮುಂಬೈ ಉದ್ಯಮಿ ಮತ್ತು ಕಾರ್ಪೊರೇಟರ್ ಸಂತೋಷ್ ಶೆಟ್ಟಿ ದಳಂದಿಲ, ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅರವಿಂದ ಭಟ್ ಪದ್ಯಾಣ, ಪ್ರಮುಖರಾದ ಶ್ರೀಕಾಂತ್ ಬಂಗೇರ, ಶಂಕರನಾರಾಯಣ ಭಟ್, ಬಂಟರ ಸಂಘ ಮುಂಬೈ ಕಾರ್ಯದರ್ಶಿ ಡಾ.ಆರ್. ಕೆ. ಶೆಟ್ಟಿ, ಉದ್ಯಮಿಗಳಾದ ಶ್ರೀಕಾಂತ ಶೆಟ್ಡಿ ಸಂಕೇಶ, ಮಹಾಬಲ ಕೊಟ್ಟಾರಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರವೀಂದ್ರನಾಥ ಭಂಡಾರಿ ಪುಣ್ಕೆಮಜಲು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ರಾಧಾಕೃಷ್ಣ ಆಳ್ವ, ಆರಾಧನಾ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ ಉಪಸ್ಥಿತರಿದ್ದರು. ಉಪಾಧ್ಯಕ್ಷ ಅಶೋಕ ಪಕ್ಕಳ ವಾಮದಪದವು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಈ ಸಂದರ್ಭ ರಮಾ ಎಸ್.ಭಂಡಾರಿ ಅವರ ಸಂಪಾದಕತ್ವದಲ್ಲಿ ಹೊರತಂದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು. ಪ್ರಮೋದ್ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಧರ್ಮದ ಪರಿಪಾಲನೆಯಿಂದ ಜಗತ್ತಿನ ಉಳಿವು: ರಾಘವೇಶ್ವರ ಸ್ವಾಮೀಜಿ"