www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಬಂಟ್ವಾಳ: ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಆರಂಭಗೊಂಡಿದೆ. ಮಂಗಳವಾರ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆದರೆ, ಬುಧವಾರ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಸಂಜೆ ನಾಟಕ ಓಂ ಶ್ರೀ ಕಲಾವಿದೆರ್ ಬಿ.ಸಿ.ರೋಡ್ ವತಿಯಿಂದ ಅಂದ್ ಂಡ ಅಂದ್ ಪನ್ಲೆ ಪ್ರದರ್ಶನಗೊಂಡಿತು. ಬೆಳಗ್ಗೆ ಗಣಪತಿ ಹೋಮ, ಅಂಕುರ ಪೂಜೆ, ಬಿಂಬಶುದ್ಧಿ ಸಹಿತ ವಿವಿಧ ಕಾರ್ಯಕ್ರಮಗಳು, ಮಧ್ಯಾಹ್ನ, ರಾತ್ರಿ ಅನ್ನಸಂತರ್ಪಣೆ, ರಾತ್ರಿ ದುರ್ಗಾನಮಸ್ಕಾರ ಪೂಜೆ ನಡೆಯಿತು. ಆರೆಸ್ಸೆಸ್ ನ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರು ಕುಟುಂಬ ಸಮಾವೇಶದಲ್ಲಿ ಉಪನ್ಯಾಸ ನೀಡಿದರು. ಆರೆಸ್ಸೆಸ್ ಪುತ್ತೂರು ಜಿಲ್ಲಾ ಸಂಘ ಚಾಲಕ್ ಕೊಡ್ಮಣ್ ಕಾಂತಪ್ಪ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ವೇದಿಕೆಯಲ್ಲಿದ್ದರು.
ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ಭಜನೆ, ಗೊಂಬೆ ಕುಣಿತ, ಬಣ್ಣದ ಕೊಡೆಗಳು, ಕಲಶ ಹೊತ್ತ ಮಹಿಳೆಯರ ತಂಡ ಮೆರವಣಿಗೆಗೆ ವಿಶೇಷ ಮೆರುಗು ನೀಡಿದರು. ಬಿ.ಸಿ.ರೋಡಿನಿಂದ ದೇವಂದಬೆಟ್ಟು ದೇವಸ್ಥಾನದವರೆಗೆ ಸುಮಾರು ೮ ಕಿ.ಮೀ ದೂರವನ್ನು ಭಕ್ತರು ಪಾದಯಾತ್ರೆಯ ಮೂಲಕ ಕ್ರಮಿಸಿದರು. ೩ ಸಾವಿರಕ್ಕಿಂತಲೂ ಅಧಿಕ ಮಂದಿ ಮೆರವಣಿಗೆಯಲ್ಲಿ ಪಾಲ್ಗೊಂಡು ಅದ್ಧೂರಿಯ ಮೆರವಣಿಗೆಗೆ ಸಾಕ್ಷಿಯಾದರು. ಈ ಸಂದರ್ಭ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಪೊಳಲಿ ಗಿರಿಪ್ರಕಾಶ್ ತಂತ್ರಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ರಮೇಶ ಉಪಾಧ್ಯಾಯ ನೆತ್ತರಕೆರೆ, ಪ್ರಧಾನ ಕಾರ್ಯದರ್ಶಿ ದಾಮೋದರ ನೆತ್ತರಕೆರೆ, ಮಾಜಿ ಸಚಿವ ಬಿ.ರಮನಾಥ ರೈ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ, ಗೌರವಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮುಂಡಾಜೆಗುತ್ತು, ಪ್ರಧಾನ ಕಾರ್ಯದರ್ಶಿ ಗಣೇಶ್ ಸುವರ್ಣ ತುಂಬೆ, ಸಂಚಾಲಕ ತಾರನಾಥ ಕೊಟ್ಟಾರಿ, ಕೋಶಾಧಿಕಾರಿ ಕವಿರಾಜ್ ಚಂದ್ರಿಗೆ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ರಾಮಕೃಷ್ಣ ಆಳ್ವ ಪೊನ್ನೊಡಿ, ದೇವಳ ಅರ್ಚಕ ರಾಮಕೃಷ್ಣ ಕಡಂಬಳಿತ್ತಾಯ ಪ್ರಮುಖರಾದ ಸೋಮಪ್ಪ ಕೋಟ್ಯಾನ್, ದೇವಪ್ಪ ಪೂಜಾರಿ, ಪ್ರಕಾಶ್ ಅಂಚನ್, ಪ್ರಕಾಶ್ ಶೆಟ್ಟಿ ಶ್ರೀ ಶೈಲ, ಮಧುಸೂದನ್ ಶೆಣೈ, ದಾಮೋದರ್ ನೆತ್ತರಕೆರೆ, ಮನೋಜ್ ವಳವೂರು, ಪುರುಷೋತ್ತಮ ಕೊಟ್ಟಾರಿ, ಮನೋಹರ್ ಕಂಜತ್ತೂರು, ಪುಷ್ಪರಾಜ್ ಶೆಟ್ಟಿ, ಪ್ರಮೋದ್ ಕುಮಾರ್ ಅಜ್ಜಿಬೆಟ್ಟು, ಪ್ರದೀಪ್ ಅಜ್ಜಿಬೆಟ್ಟು, ಹರಿಪ್ರಸಾದ್ , ಕಳ್ಳಿಗೆ ಗ್ರಾ.ಪಂ.ಅಧ್ಯಕ್ಷೆ ಯಶೋಧ ಜಾರಂದಗುಡ್ಡೆ,ವಿವಿಧ ಸಮಿತಿ ಪದಾಧಿಕಾರಿಗಳಾದ ಭುವನೇಶ್ ಪಚ್ಚಿನಡ್ಕ, ನವೀನ್ ಚಂದ್ರ ಶೆಟ್ಟಿ ಮುಂಡಾಜೆಗುತ್ತು,, ಗಣೇಶ್ ಸುವರ್ಣ ತುಂಬೆ, ಯೋಗೀಶ್ ಕುಮಾರ್ ದರಿಬಾಗಿಲು,ದೇವಿಪ್ರಸಾದ್ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರು ಮೊದಲಾದವರಿದ್ದರು