www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಬಂಟ್ವಾಳ: ಭಾನುವಾರ ನಸುಕಿನ ವೇಳೆಗೆ ಬಂಟ್ವಾಳ ತಾಲೂಕಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಬೈಕ್ ನಜ್ಜುಗುಜ್ಜಾಗಿದೆ. ಕಲ್ಲಡ್ಕದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗುತ್ತಿದ್ದು, ಅಲ್ಲಲ್ಲಿ ರಸ್ತೆಯಂಚಿನಲ್ಲಿ ಅಪಾಯ ಎದುರಿಸುವಂತಾಗಿದೆ. ಸೂರ್ಯ ಮೂಡುವ ಮೊದಲು ಪ್ರಖರ ಲೈಟ್ ನೊಂದಿಗೆ ವಾಹನಗಳು ಸಾಗುವ ವೇಳೆ ದ್ವಿಚಕ್ರ ವಾಹನ ಸವಾರರೂ ಗಲಿಬಿಲಿಗೊಳ್ಳುವಂತಾಗಿದ್ದು, ಈ ಭಾಗದಲ್ಲಿ ಜಾಗರೂಕತೆಯಿಂದ ವಾಹನ ಸಂಚರಿಸಬೇಕಾಗುತ್ತದೆ. ಆದಾಗ್ಯೂ ಅಪಘಾತಗಳು ಆಗಾಗ್ಗೆ ಸಂಭವಿಸುವ ಪೂರ್ಲಿಪ್ಪಾಡಿಯಲ್ಲಿ ಮತ್ತೊಂದು ಅಪಘಾತ ನಡೆದಿದೆ. ಬಂಟ್ವಾಳ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…