Categories: Uncategorized

ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಮಾನೋತ್ಸವ: ಸಮಾಜ ಸೇವಾ ಸಹಕಾರಿ ಬ್ಯಾಂಕ್ ನಿಂದ ವಿವಿಧ ಕಾರ್ಯಕ್ರಮ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಡಾ. ಅಮ್ಮೆಂಬಳ ಬಾಳಪ್ಪರವರ 100 ನೇ ಜನ್ಮದಿನಾಚರಣೆ ಪ್ರಯುಕ್ತ ಸಮಾಜ ಸೇವಾ ಸಹಕಾರಿ ಸವಿ ಸಂಭ್ರಮ-2022 ಕಾರ್ಯಕ್ರಮವನ್ನು ಫೆ. 27ರಂದು ಬೆಳಿಗ್ಗೆ ಕೇಂದ್ರ ಕಚೇರಿಯ ಸಮಾಜ ಸಹಕಾರಿ ಭವನದಲ್ಲಿ ಆಯೋಜಿಸಿದೆ ಎಂದು ಬ್ಯಾಂಕ್ ಅಧ್ಯಕ್ಷ ಸುರೇಶ್ ಕುಲಾಲ್ ತಿಳಿಸಿದರು. ಬಂಟ್ವಾಳ ಕೇಂದ್ರ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಕಾರ್ಯಕ್ರಮ  ಉದ್ಘಾಟಿಸಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ರಾಜೇಶ್ ನಾಯ್ಕ್, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಕೆ, ಪದ್ಮನಾಭ ಕೊಟ್ಟಾರಿ, ಕುಲಾಲ ಸಂಘ ಬೆಂಗಳೂರು ಅಧ್ಯಕ್ಷ ಪುರುಷೋತ್ತಮ ಚೇಂಡ್ಲ ಇವರು ಉಪಸ್ಥಿತರಿರುವರು. ಪ್ರಧಾನ ಭಾಷಣಕಾರರಾಗಿ ಡಾ. ದುಗ್ಗಪ್ಪ ಕಜೆಕಾರ್‌ ಮಾತನಾಡುವರು ಎಂದರು.

ಜಾಹೀರಾತು

ಇದೇ ವೇಳೆ ಬೆಳಗ್ಗೆ 9.30ರಿಂದ  ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಇವರಿಂದ ನೇತ್ರ ತಪಾಸಣಾ ಶಿಬಿರ, ರಾಮ ಕುಲಾಲ್ ಪಕ್ಕಾಲು ಅವರಿಗೆ ಡಾ. ಅಮ್ಮೆಂಬಳ ಬಾಳಪ್ಪ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿವೇತನ ವಿತರಣೆ ಹಾಗೂ ಸ್ವಸಹಾಯ ಸಂಘಗಳ ಸಮ್ಮಿಲನ ಮತ್ತು ಗುರುತಿಸುವಿಕೆ ಕಾರ್ಯಕ್ರಮ ಹಾಗೂ ಮದ್ಯಾಹ್ನ 2.30 ರಿಂದ ಸಂಜೆ ಗಂಟೆ 5.30 ರವರೆಗೆ ಅಮೂಲ್ಯ ಸ್ವ ಸಹಾಯ ಸಂಘಗಳ ಸದಸ್ಯರು ಹಾಗೂ ಸದಸ್ಯರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಂಜೆ ಗಂಟೆ 6ರಿಂದ ರಾತ್ರಿ ಗಂಟೆ 10 ರವರೆಗೆ ಶ್ರೀ ಧಾಮ ಮಾಣಿಲ ಯಕ್ಷಗಾನ ತಂಡದಿಂದ ಸೂರ್ಯರಶ್ಮಿ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಅಮ್ಮೆಂಬಳ ಬಾಳಪ್ಪ ಅವರ ಸೇವೆ ಮಾಡಿದ ನಾಗಳಚ್ಚಿಲು ಹೇಮಾವತಿ ಅವರನ್ನು ಗೌರವಿಸಲಾಗುವುದು, ಉಚಿತ ಕನ್ನಡಕ ವಿತರಣೆಯೂ ನಡೆಯಲಿದೆ ಎಂದರು. ಉಪಾಧ್ಯಕ್ಷ ಪದ್ಮನಾಭ, ನಿರ್ದೇಶಕರಾದ ನಾಗೇಶ್ ಬಾಳೆಹಿತ್ಲು, ಜನಾರ್ದನ ಬೊಂಡಾಲ, ವಿಜಯಕುಮಾರ್ ಮತ್ತು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬೋಜ ಮೂಲ್ಯ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

2 hours ago