ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯಿಂದ ಈ-ಶ್ರಮ್ ಕಾರ್ಡ್ ವಿತರಣೆ, ಮಾಹಿತಿ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಮತ್ತು ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾರ್ಮಿಕ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಣೆ ಹಾಗೂ ಮಾಹಿತಿ ಶಿಬಿರ ಇತ್ತೀಚೆಗೆ ಅಮ್ಮುಂಜೆಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ, ಅಸಂಘಟಿತ ವಲಯದ ಕಾರ್ಮಿಕರಿಗೆ ದೊರೆಯುವ ಸವಲತ್ತುಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸುವ ಮೂಲಕ ಸಮಾಜದ ಹಿಂದುಳಿದ ವರ್ಗಗಳನ್ನು ಮುಖ್ಯ ವಾಹಿನಿಗೆ ತರುವಲ್ಲಿ ವಿಶೇಷವಾಗಿ ಪ್ರಯತ್ನ ನಡೆಸಬೇಕು. ಆ ಮೂಲಕ ಅಂತಹ ಕಾರ್ಮಿಕರನ್ನು ಸಂಘಟಿತರನ್ನಾಗಿ ಮಾಡುವ ಕಾರ್ಯ ನಡೆಸಬೇಕಾಗಿದೆ ಎಂದರು.

ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ ಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲ ತಾಣದ ಜಿಲ್ಲಾ ಮುಖ್ಯಸ್ಥ ಅರುಣ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ನಿರಂಜನ್ ರೈ, ಪದಾಧಿಕಾರಿ ಹರ್ಷದ್ ಕುಕ್ಕಿಲ, ಪ್ರಮುಖರಾದ ಅಬ್ದುಲ್ ರಜಾಕ್, ಮನೋಜ್, ರವಿರಾಜ್ ಜೈನ್, ಗೋಡ್‍ಫ್ರಿ ಫೆರ್ನಾಂಡಿಸ್, ಗಂಗಾಧರ ಪೂಜಾರಿ, ವೇಣುಗೋಪಾಲ್ ಮೊದಲಾದವರು ಭಾಗವಹಿಸಿದ್ದರು. ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ವಿಭಾಗದ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ರೋಷನ್ ರೈ ಪ್ರಸ್ತಾವನೆಗೈದರು. ಅಮುಂಜೆ ವಲಯ ಕಾಂಗ್ರೆಸ್ ಅದ್ಯಕ್ಷ ಚಂದ್ರಶೇಖರ ಭಂಡಾರಿ ಸ್ವಾಗತಿಸಿ, ಅಬ್ದುಲ್ ಹಕಿಂ ಅಮ್ಮುಂಜೆ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯಿಂದ ಈ-ಶ್ರಮ್ ಕಾರ್ಡ್ ವಿತರಣೆ, ಮಾಹಿತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*