www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಮತ್ತು ಪಾಣೆಮಂಗಳೂರು ಬ್ಲಾಕ್ ಅಸಂಘಟಿತ ಕಾರ್ಮಿಕ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ್ ಕಾರ್ಡ್ ವಿತರಣೆ ಹಾಗೂ ಮಾಹಿತಿ ಶಿಬಿರ ಇತ್ತೀಚೆಗೆ ಅಮ್ಮುಂಜೆಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಸಚಿವ ಬಿ ರಮಾನಾಥ ರೈ ಮಾತನಾಡಿ, ಅಸಂಘಟಿತ ವಲಯದ ಕಾರ್ಮಿಕರಿಗೆ ದೊರೆಯುವ ಸವಲತ್ತುಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸುವ ಮೂಲಕ ಸಮಾಜದ ಹಿಂದುಳಿದ ವರ್ಗಗಳನ್ನು ಮುಖ್ಯ ವಾಹಿನಿಗೆ ತರುವಲ್ಲಿ ವಿಶೇಷವಾಗಿ ಪ್ರಯತ್ನ ನಡೆಸಬೇಕು. ಆ ಮೂಲಕ ಅಂತಹ ಕಾರ್ಮಿಕರನ್ನು ಸಂಘಟಿತರನ್ನಾಗಿ ಮಾಡುವ ಕಾರ್ಯ ನಡೆಸಬೇಕಾಗಿದೆ ಎಂದರು.
ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ ಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲ ತಾಣದ ಜಿಲ್ಲಾ ಮುಖ್ಯಸ್ಥ ಅರುಣ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ನಿರಂಜನ್ ರೈ, ಪದಾಧಿಕಾರಿ ಹರ್ಷದ್ ಕುಕ್ಕಿಲ, ಪ್ರಮುಖರಾದ ಅಬ್ದುಲ್ ರಜಾಕ್, ಮನೋಜ್, ರವಿರಾಜ್ ಜೈನ್, ಗೋಡ್‍ಫ್ರಿ ಫೆರ್ನಾಂಡಿಸ್, ಗಂಗಾಧರ ಪೂಜಾರಿ, ವೇಣುಗೋಪಾಲ್ ಮೊದಲಾದವರು ಭಾಗವಹಿಸಿದ್ದರು. ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ವಿಭಾಗದ ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ರೋಷನ್ ರೈ ಪ್ರಸ್ತಾವನೆಗೈದರು. ಅಮುಂಜೆ ವಲಯ ಕಾಂಗ್ರೆಸ್ ಅದ್ಯಕ್ಷ ಚಂದ್ರಶೇಖರ ಭಂಡಾರಿ ಸ್ವಾಗತಿಸಿ, ಅಬ್ದುಲ್ ಹಕಿಂ ಅಮ್ಮುಂಜೆ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.