ಬಂಟ್ವಾಳ

ಕಾಂಗ್ರೆಸ್ ನೀತಿ ಖಂಡಿಸಿ, ಬಿ.ಸಿ.ರೋಡಿನಲ್ಲಿ ಬಂಟ್ವಾಳ ಬಿಜೆಪಿ ಪ್ರತಿಭಟನೆ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಬಂಟ್ವಾಳ: ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ವಿಧಾನಮಂಡಲ ಸಹಿತ ಹಲವೆಡೆ ಜನವಿರೋಧಿ ನೀತಿ ಅನುಸರಿಸುತ್ತಿದ್ದು, ಇಂಥ ಕೃತ್ಯಗಳಿಂದ ಜನರನ್ನು ಗೊಂದಲಕ್ಕೆ ಕೆಡಹುವ ಪ್ರವೃತ್ತಿ ವಿರುದ್ಧ ಬಿಜೆಪಿ ಪ್ರತಿ ಕಡೆಯಲ್ಲೂ ಪ್ರತಿಭಟನೆ ನಡೆಸುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಶನಿವಾರ ಬಂಟ್ವಾಳ ಬಿಜೆಪಿ ವತಿಯಿಂದ ಬಿ.ಸಿ.ರೋಡಿನ ಫ್ಲೈಓವರ್ ಕೆಳಗೆ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಕ್ಷೇತ್ರದ ಸಮಸ್ಯೆಯನ್ನು ವಿಧಾನಮಂಡಲದಲ್ಲಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜನರು ನಮ್ಮನ್ನು ಶಾಸಕರನ್ನಾಗಿ ಆರಿಸಿ ಕಳಿಸಿದ್ದಾರೆ.ಆದರೆ ಈ ಬಾರಿಯ ಅಧಿವೇಶನದಲ್ಲಿ ಯಾವುದೇ ಚರ್ಚೆ,ಕಲಾಪವನ್ನೇ ನಡೆಸಲು ಬಿಡದ ಕಾಂಗ್ರೆಸ್ ಪಕ್ಷ  ಜನವಿರೋಧಿ ನೀತಿಯನ್ನು ಅನುಸರಿಸಿದೆ ಎಂದರು.

ಪ್ರಧಾನ ಭಾಷಣಗೈದ ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಅವರು ಹಿಜಾಬ್ ಮತ್ತು ರಾಷ್ಟ್ರಧ್ವಜದ ವಿಚಾರವನ್ನು ಮುಂದಿಟ್ಟುಕೊಂಡು   ಕಾಂಗ್ರೆಸ್  ನಾಯಕರು ಜನರ ದಾರಿ ತಪ್ಪಿಸುವ ಕಾರ್ಯದಲ್ಲಿ ನಿರತವಾಗಿದ್ದು, ಇಬ್ಬಗೆಯ ನೀತಿ ಬಯಲಾಗಿದೆ ಎಂದರು. ಅಧ್ಯಕ್ಷತೆಯನ್ನು ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ವಹಿಸಿದ್ದರು. ಶಿವಮೊಗ್ಗ ಜಿಲ್ಲೆಯಲ್ಲಿ ಕೊಲೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಅವರಿಗೆ ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ದಾಂಜಲಿ ಅರ್ಪಿಸಲಾಯಿತು. ಮಾಜಿ  ಶಾಸಕ ಪದ್ಮನಾಭ ಕೊಟ್ಟಾರಿ, ಕೆಯುಡಬ್ಲುಸಿ ನಿರ್ದೇಶಕಿ ಸುಲೋಚನಾ ಜಿ.ಕೆ ಭಟ್,ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಭೂ ಬ್ಯಾಂಕ್ ಉಪಾಧ್ಯಕ್ಷ ಚಂದ್ರಶೇಖರ ಬಂಗೇರ,ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಜಿಪಂ ಮಾಜಿ ಸದಸ್ಯರಾದ ತುಂಗಪ್ಪ ಬಂಗೇರ, ಕಮಾಲಾಕ್ಷಿ ಪೂಜಾರಿ, ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಹರಿಪ್ರಸಾದ್,  ಪಕ್ಷದ ಪ್ರಮುಖರಾದ ಮೋನಪ್ಪ ದೇವಸ್ಯ, ,ರಮಾನಾಥ ರಾಯಿ, ದಿನೇಶ್ ಅಮ್ಟೂರು, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಕೇಶವ ದೈಪಲ, ಜನಾರ್ದನ ಬೊಂಡಾಲ, ಸಂದೇಶ್ ಶೆಟ್ಟಿ, ಸೀಮಾ ಮಾಧವ,  ಹರ್ಪೀಣಿ ಮೊದಲಾದವರಿದ್ದರು.ಮಂಡಲದ ಪ್ರ.ಕಾರ್ಯದರ್ಶಿ  ಡೊಂಬಯ್ಯ ಅರಳ ಸ್ವಾಗತಿಸಿ ವಂದಿಸಿದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts