ಜಿಲ್ಲಾ ಸುದ್ದಿ

ಮಾ.6ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ, ರವಿ ಕಕ್ಯಪದವು ಅವರಿಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ, ವೆಂಕಟೇಶ್ ಬಂಟ್ವಾಳ್ ಸಹಿತ ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ

www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆ, ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ- 2021 ಪ್ರದಾನ ಮತ್ತು ಹಿರಿಯ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಗೌರವ ಸನ್ಮಾನ ಸಮಾರಂಭ ಮಾ.6ರಂದು ಬೆಳಗ್ಗೆ 11 ಗಂಟೆಗೆ ತಣ್ಣೀರುಬಾವಿ ಟ್ರೀ ಪಾರ್ಕ್‍ನ ಗೆಸ್ಟ್ ಹೌಸ್ ಬಳಿ ನಡೆಯಲಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ. ಸದಾಶಿವ ಶೆಣೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಅಧ್ಯಕ್ಷತೆ ವಹಿಸಲಿದ್ದಾರೆ.ಸಮಾಜಸೇವಕ ರವಿ ಕಕ್ಯೆಪದವು ಅವರಿಗೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಿರಿಯ ಪತ್ರಕರ್ತರಾದ ದಿನಕರ ಇಂದಾಜೆ, ವಿದ್ಯಾಧರ ಶೆಟ್ಟಿ, ರಾಜೇಶ್ ನಾಯ್ಕ್, ಯಶವಂತ ಕಾಟಿಪಳ್ಳ, ಸತೀಶ್ ಕಲ್ಮಾಡಿ ಮತ್ತು ವೆಂಕಟೇಶ್ ಬಂಟ್ವಾಳ ಅವರಿಗೆ ಚಲನಚಿತ್ರ ನಟ ನವೀನ್ ಡಿ.ಪಡೀಲ್ 2021ನೇ ಸಾಲಿನ ಗೌರವ ಸನ್ಮಾನ ನೆರವೇರಿಸಲಿದ್ದಾರೆ. ಮಂಗಳೂರು ಉಪ ಅರಣ್ಯ ಸಂರಕ್ಷಣಾಕಾರಿ ಡಾ.ವೈ.ದಿನೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಜಾಹೀರಾತು

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್. ಭಾಗವಹಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ