www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಬಂಟ್ವಾಳ: ಕೊಣಾಜೆಯ ಮಂಗಳೂರು ವಿವಿ ಕ್ಯಾಂಪಸ್ ನಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಕರಾಟೆ ಪಂದ್ಯಾವಳಿಯಲ್ಲಿ ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಥಮ ಮತ್ತು ದ್ವಿತೀಯ ಸ್ಥಾನ ಲಭಿಸಿದೆ. ವಿದ್ಯಾರ್ಥಿನಿ ಸಹನಾ ಶೆಟ್ಟಿ ಪ್ರಥಮ ಸ್ಥಾನ ಮತ್ತು ಸೋನಿ ಶೆಟ್ಟಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಕೂಡಿಗೆ ರಘುನಾಥ ಶೆಣೈ, ಕಾಲೇಜು ಸಂಚಾಲಕ ಕೂಡಿಗೆ ಪ್ರಕಾಶ್ ಶೆಣೈ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…