www.bantwalnews.com Report ಬಂಟ್ವಾಳನ್ಯೂಸ್ ವರದಿ ಸಂಪಾದಕ: ಹರೀಶ ಮಾಂಬಾಡಿ, ಜಾಹೀರಾತುಗಳಿಗೆ ಸಂಪರ್ಕಿಸಿ: 9448548127
ಬಂಟ್ವಾಳ: ಇಲ್ಲಿನ ವಿದ್ಯಾಗಿರಿಯ ಶ್ರೀ ವೆಂಕಟರಮಣ ಸ್ಚಾಮಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾಲೇಜಿನ ಯಕ್ಷಗಾನ ಕೇಂದ್ರದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಹನುಮಗಿರಿ ಮೇಳದಿಂದ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಿತು. ಈ ಸಂದರ್ಭ ಕೇಂದ್ರದ ಗುರು ಯೋಗೀಶ ಶರ್ಮ ಅಳದಂಗಡಿ ಮತ್ತು ಹನುಮಗಿರಿ ಮೇಳದ ಭಾಗವತರೂ ಆಗಿರುವ ಕಾಲೇಜಿನ ಹಳೇ ವಿದ್ಯಾರ್ಥಿ ಚಿನ್ಮಯ ಭಟ್ ಕಲ್ಲಡ್ಕ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಸನ್ಮಾನಿಸಿದರು.
ಈ ಸಂದರ್ಭ ಮಾತನಾಡಿದ ಶ್ರೀನಾಥ್, ಕನ್ನಡ ಸಾಹಿತ್ಯಕ್ಕೆ ಯಕ್ಷಗಾನದ ದೊಡ್ಡ ಕೊಡುಗೆ ಇದ್ದು, ಶುದ್ಧ ಕನ್ನಡ ಭಾಷೆಯನ್ನು ಪ್ರಯೋಗಿಸುವ ಮೂಲಕ ಭಾಷಾ ಸಿರಿವಂತಿಕೆಯನ್ನು ಅಭಿವೃದ್ಧಿಪಡಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಯಕ್ಷಗಾನ ಆಸಕ್ತರ ಸಂಖ್ಯೆ ಜಾಸ್ತಿ ಆಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಇದು ಸಾಹಿತ್ಯಾಧ್ಯಯನಕ್ಕೂ ಪೂರಕವಾಗಿದೆ ಎಂದರು.
ಕಾಲೇಜಿನ ಪ್ರಿನ್ಸಿಪಾಲ್ ಡಾ. ಸುಯೋಗ ವರ್ಧನ್ ಡಿ.ಎಂ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಉಪನ್ಯಾಸಕರಾದ ಪ್ರೊ.ಮಹಾಬಲೇಶ್ವರ ಶರ್ಮಾ, ಡಾ. ಟಿ.ಕೆ. ರವೀಂದ್ರನ್, ಎಸ್.ವಿ.ಎಸ್.ಪದವಿಪೂರ್ವ ಕಾಲೇಜು ಪ್ರಿನ್ಸಿಪಾಲ್ ಮನೋಹರ್ ಎಸ್. ದೊಡ್ಡಮನಿ ಉಪಸ್ಥಿತರಿದ್ದರು. ಕಾಲೇಜು ಉಪನ್ಯಾಸಕ, ಯಕ್ಷಗಾನ ಕೇಂದ್ರದ ನಿರ್ದೇಶಕರಾದ ಶಿವಣ್ಣ ಪ್ರಭು ಸನ್ಮಾನಿತರ ಪರಿಚಯ ಮಾಡಿದರು. ಉಪನ್ಯಾಸಕ ಕಿಟ್ಟು ರಾಮಕುಂಜ ಕಾರ್ಯಕ್ರಮ ನಿರ್ವಹಿಸಿದರು.
Be the first to comment on "ಬಂಟ್ವಾಳ ಎಸ್.ವಿ.ಎಸ್. ಕಾಲೇಜಿನಲ್ಲಿ ಯಕ್ಷಗಾನ, ಸನ್ಮಾನ"